ಶ್ರೀರಂಗಪಟ್ಟಣ: ತಾಲ್ಲೂಕಿನ ಕೂಡಲಕುಪ್ಪೆಯಲ್ಲಿ ಶ್ರೀಶಕ್ತಿ ಶನೇಶ್ವರಸ್ವಾಮಿ ದೇವರ ಬ್ರಹ್ಮ ರಥೋತ್ಸವ ಮೇ 27ರಂದು ನಡೆಯಲಿದೆ.
ಅಂದು ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಆರಂಭವಾಗಲಿದೆ. ಬಾದಾಮಿ ಅಮಾವಾಸ್ಯೆ ನಿಮಿತ್ತ ನಡೆಯುವ 6ನೇ ವರ್ಷದ ರಥೋತ್ಸವದಲ್ಲಿ ಸಹಸ್ರಾರು ಮಂದಿ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ದೇವಾಲಯದ ಪ್ರಧಾನ ಅರ್ಚಕ ಗೌತಮ್ ತಿಳಿಸಿದ್ದಾರೆ.
ರಥೋತ್ಸವದ ನಿಮಿತ್ತ ದೇವಾಲಯದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಪೂಜಾ ಕೈಂಕರ್ಯಗಳು ಜರುಗಲಿವೆ. ಶಕ್ತಿ ಶನೇಶ್ವರ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆಗಳು ನಡೆಯಲಿವೆ. ಲೋಕ ಕಲ್ಯಾಣಾರ್ಥವಾಗಿ ಪುಷ್ಪಯಾಗ ಮತ್ತು ಹೋಮವನ್ನೂ ಏರ್ಪಡಿಸಲಾಗಿದೆ. ಸಾಮೂಹಿಕ ಅನ್ನ ಸಂತರ್ಪಣೆ ಇರುತ್ತದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.