ಸಾವು (ಪ್ರಾತಿನಿಧಿಕ ಚಿತ್ರ)
ಮಂಡ್ಯ: ಕಾರು ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಇಂಡುವಾಳು ಗ್ರಾಮದ ಸಮೀಪ ಶನಿವಾರ ನಡೆದಿದೆ.
ಚಾಲಕ ತೇಜಸ್ (23) ಮೃತಪಟ್ಟವರು.
ಗ್ರಾಮದ ಬೆಂಗಳೂರು–ಮೈಸೂರು ಹೆದ್ದಾರಿಯ ಮೇಲ್ಸೇತುವೆ ಮೇಲೆ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿ ಒಡೆದು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.