ನಾಗಮಂಗಲ ತಾಲ್ಲೂಕಿನ ತಾವರೆಕೆರೆ ಸಮೀಪದಲ್ಲಿ ಕಾರಿಗೆ ಬಿದ್ದಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದರು
ನಾಗಮಂಗಲ: ತಾಲ್ಲೂಕಿನ ತಾವರೆಕೆರೆ ಬಳಿ ಮಂಗಳವಾರ ಸಂಜೆ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕೀಟ್‌ನಿಂದ ಕಾರಿಗೆ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಆದಿಚುಂಚನಗಿರಿ ಕಡೆಗೆ ಚಲಿಸುತ್ತಿದ್ದ ಬೆಂಗಳೂರಿನ ಗಿಡದಕೊನೆನಹಳ್ಳಿಯ ಲೋಕೇಶ್ ಅವರ ಕಾರಿನ ಬ್ಯಾಟರಿಯಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕೀಟ್ ಉಂಟಾಗಿದ್ದು, ತಕ್ಷಣವೇ ಕಾರಿನಲ್ಲಿದ್ದ ಎಲ್ಲರೂ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕೆಲ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರೂ ಕಾರು ಸುಟ್ಟು ಹೋಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.