ಮಂಡ್ಯ: ‘ಗಂಗಾ ಆರತಿ’ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ ‘ಕಾವೇರಿ ಆರತಿ’ ಮಾಡುವ ಕಾರ್ಯಕ್ರಮವು ಸೆ.26ರ ಶುಕ್ರವಾರದಿಂದ ಐದು ದಿನ ಕೆಆರ್‌ಎಸ್ ಅಣೆಕಟ್ಟೆಯ ಬಳಿ ನಡೆಯಲಿದೆ.
ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.
ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ– ಹೊರರಾಜ್ಯಗಳ ನಾನಾ ಭಾಗಗಳಿಂದ ಆಗಮಿಸಿ, ‘ಕಾವೇರಿ ಆರತಿ’ಯನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಿದೆ. ಕಾವೇರಿ ತಾಯಿ ಪ್ರಸಾದವಾಗಿ ಪ್ರವಾಸಿಗರಿಗೆ ವಿತರಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲಾಡು ತಯಾರಿಸಲು ಸೂಚಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್‌ಎಸ್ ಬೃಂದಾವನ ವೀಕ್ಷಣೆಗೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರು ‘ಕಾವೇರಿ ಆರತಿ’ ವೀಕ್ಷಿಸಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.