ADVERTISEMENT

ಕಾವೇರಿ ತೀರ್ಥ ವಿತರಿಸಿದ ಸಚಿವ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 8:11 IST
Last Updated 18 ಅಕ್ಟೋಬರ್ 2021, 8:11 IST
ಮಂಡ್ಯ ನಗರದ ಕಾಳಿಕಾಂಬ ದೇವಾಲಯದಲ್ಲಿ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು. ಶಾಸಕ ಎಂ.ಶ್ರೀನಿವಾಸ್, ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ, ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು, ಜಿಲ್ಲಾಧಿಕಾರಿ ಎಸ್‌.ಅಶ್ವತಿ ಇದ್ದಾರೆ
ಮಂಡ್ಯ ನಗರದ ಕಾಳಿಕಾಂಬ ದೇವಾಲಯದಲ್ಲಿ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು. ಶಾಸಕ ಎಂ.ಶ್ರೀನಿವಾಸ್, ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ, ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು, ಜಿಲ್ಲಾಧಿಕಾರಿ ಎಸ್‌.ಅಶ್ವತಿ ಇದ್ದಾರೆ   

ಮಂಡ್ಯ: ಕಾವೇರಿ ಮಡಿಲಿಗೆ ಹೋಗಿ ತೀರ್ಥವನ್ನು ನನ್ನ ಜನ್ಮ ಭೂಮಿಗೆ ತರಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಇದರಿಂದ ರಾಜ್ಯದ ಜನತೆಗೆ ಒಳಿತಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಕಾಳಿಕಾಂಬ ದೇವಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೀರ್ಥೋದ್ಭವದ ಸನ್ನಿವೇಶದಲ್ಲಿ ಕಾವೇರಿ ಉಕ್ಕಿ ಹರಿದ ನೀರು ನೋಡಲು ಸಂತೋಷವಾಯಿತು. ಈ ಕಾವೇರಿ ತಾಯಿ ಆಶೀರ್ವಾದ ಎಲ್ಲರ ಮೇಲಿರಲಿ. ಹಾಗಾಗೀ ಈ ತೀರ್ಥೋದ್ಭವದ ಕಾವೇರಿ ಮಾತೆ ನೀರನ್ನು ಮಂಡ್ಯದ ಭಕ್ತರಿಗೆ ನೀಡಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

ADVERTISEMENT

ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಲು ಸರ್ಕಾರ ಉತ್ತಮ ನಿರ್ಧಾರ ತೆಗೆದುಕೊಳ್ಳಲು ಸಭೆಗೆ ಆಹ್ವಾನಿಸಿದ್ದು, ರೈತರ ಪರವಾಗಿಯೇ ನಿರ್ಧಾರ ಬರಲಿದೆ.ಮಂಡ್ಯದ ಶಕ್ತಿ ದೇವತೆಯಾದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಅವರು ಆಹ್ವಾನಿಸಿರುವ ಸಭೆಗೆ ಬನ್ನಿ ಎಂದು ತಿಳಿಸಿದರು.

ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಮಾತನಾಡಿ, ಗ್ರಾಮ ದೇವತೆಯ ಸನ್ನಿಧಿಯಲ್ಲಿ ಕಾವೇರಿ ತೀರ್ಥ ವಿನಿಯೋಗ ಹಾಗೂ ಅಭೀಷೇಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇದು ಪ್ರಥಮ ಕಾರ್ಯಕ್ರಮವಾಗಿದ್ದು, ನಾರಾಯಣಗೌಡರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಕಾವೇರಿ ತಾಯಿ ಆಶೀ ರ್ವಾದ ಎಲ್ಲರ ಮೇಲಿರಲಿ ಎಂದರು.

ಭಕ್ತರಿಗೆ ಕಾವೇರಿ ತೀರ್ಥ ನೀಡಲಾಯಿತು. ಕಾರ್ಯಕ್ರಮ ದಲ್ಲಿಶಾಸಕ ಎಂ.ಶ್ರೀನಿವಾಸ್, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಮೈಷುಗರ್ ಕಾರ್ಖಾನೆ ಅಧ್ಯಕ್ಷ ಶಿವಲಿಂಗೇಗೌಡ, ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು, ಜಿಲ್ಲಾಧಿಕಾರಿ ಎಸ್‌.ಅಶ್ವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.