ADVERTISEMENT

ಶ್ರೀರಂಗಪಟ್ಟಣ | ತಮಿಳುನಾಡಿಗೆ ಕಾವೇರಿ ನೀರು: ರಾಸುಗಳ ಜತೆ ರೈತರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2023, 13:35 IST
Last Updated 7 ಅಕ್ಟೋಬರ್ 2023, 13:35 IST
ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ರೈತರು ಭೂಮಿತಾಯಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ ರಾಸುಗಳ ಜತೆ ಪ್ರತಿಭಟನೆ ನಡೆಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ರೈತರು ಭೂಮಿತಾಯಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ ರಾಸುಗಳ ಜತೆ ಪ್ರತಿಭಟನೆ ನಡೆಸಿದರು   

ಶ್ರೀರಂಗಪಟ್ಟಣ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ರೈತರು ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಬೆಂಗಳೂರು– ಮೈಸೂರು ಹೆದ್ದಾರಿಯ ಕುವೆಂಪು ವೃತ್ತದಿಂದ  ಮಿನಿ ವಿಧಾನಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಮಿನಿ ವಿಧಾನಸೌಧದ ಎದುರು ರಾಸುಗಳನ್ನು ಕಟ್ಟಿ ಹಾಕಿ ಒಂದು ತಾಸು ಧರಣಿ ನಡೆಸಿದರು.

’ರಾಸುಗಳಿಗೆ ನೀರು ಕೊಡಿ’ ಎಂದು ರೈತರು ಒತ್ತಾಯಿಸಿದರು. ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು. ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ರಾಜಕಾರಣಿಗಳಿಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ರೈತ ನಾಯಕ ಕೆ.ಎಸ್‌. ನಂಜುಂಡೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ದರಸಗುಪ್ಪೆ ಗ್ರಾಮದ ಕೆ. ಜಯರಾಂ, ಬಿ. ಮಹೇಶ್‌, ನಾಗರಾಜು, ಗಾಂಧಿ ಮಂಜುನಾಥ್‌, ಎಂಪಿಸಿಎಸ್‌ ಅಧ್ಯಕ್ಷ ನಯನಕುಮಾರ್‌, ಗ್ರಾ.ಪಂ. ಸದಸ್ಯ ಶ್ರೀಧರ್‌, ಸುನಿಲ್‌, ಸುರೇಶ್‌, ನಟರಾಜ್‌, ಕುಮಾರ್‌; ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ. ಕೃಷ್ಣೇಗೌಡ, ಕಾರ್ಯದರ್ಶಿ ಮಹದೇವಪುರ ಕೃಷ್ಣ, ಖಜಾಂಚಿ ಪುಟ್ಟಮಾದು, ಬಲ್ಲೇನಹಳ್ಳಿ ಮಂಜುನಾಥ್‌, ಶಿವಣ್ಣ, ಮೇಳಾಪುರ ಜಯರಾಮೇಗೌಡ, ಕೆಂಪೇಗೌಡ, ಮಹದೇವು, ರವಿಲಕ್ಷ್ಮಣ, ಬಾಬು, ಚಾಮಪ್ಪ, ಮಹಲಿಂಗು, ರವಿ, ರಾಮಕೃಷ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.