ADVERTISEMENT

ಮಂಡ್ಯ: ಗ್ರಾಮಗಳಲ್ಲಿ ರಾಸುಗಳ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 14 ಜನವರಿ 2025, 14:00 IST
Last Updated 14 ಜನವರಿ 2025, 14:00 IST
ಮಳವಳ್ಳಿ ತಾಲ್ಲೂಕಿನ ದೇವಿಪುರ ಗ್ರಾಮದಲ್ಲಿ ಸಂಕ್ರಾಂತಿ ಹಿನ್ನೆಲೆಯಲ್ಲಿ ರಾಸುಗಳನ್ನು ಕಿಚ್ಚು ಹಾರಿಸಲಾಯಿತು.
ಮಳವಳ್ಳಿ ತಾಲ್ಲೂಕಿನ ದೇವಿಪುರ ಗ್ರಾಮದಲ್ಲಿ ಸಂಕ್ರಾಂತಿ ಹಿನ್ನೆಲೆಯಲ್ಲಿ ರಾಸುಗಳನ್ನು ಕಿಚ್ಚು ಹಾರಿಸಲಾಯಿತು.   

ಮಳವಳ್ಳಿ: ಸಂಕ್ರಾಂತಿಯಂದು ತಾಲ್ಲೂಕಿನ ಎಲ್ಲೆಡೆ ರೈತರು ತಮ್ಮ ರಾಸುಗಳಿಗೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದರು.

 ಪಟ್ಟಣದ ಕೋಟೆ ಬೀದಿ ಗಂಗಾಧರೇಶ್ವರಸ್ವಾಮಿ, ಸಾರಂಗಪಾಣಿ, ಪಟ್ಟಲದಮ್ಮನ, ಕೋಟೆ ಆಂಜನೇಯಸ್ವಾಮಿ, ಹೊರವಲಯದ ಶಕ್ತಿ ದೇವತೆ ದಂಡಿನ ಮಾರಮ್ಮನ, ಮಾರೇಹಳ್ಳಿ ಲಕ್ಷ್ಮಿನರಸಿಂಹಸ್ವಾಮಿ ಹಾಗೂ ತಾಲ್ಲೂಕಿನ ಕಂದೇಗಾಲ-ಕಲ್ಲುವೀರನಹಳ್ಳಿ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆದವು.

ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ತೊಟ್ಟು ಮನೆ ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ, ಕೊಬ್ಬರಿ, ಕಬ್ಬು ಬೀರಿ ಹಬ್ಬವನ್ನು ಸಡಗರದಿಂದ ಆಚರಿಸಿದರು.

ADVERTISEMENT

ನಂತರ ಪೊಂಗಲ್ ಎರಚಿ ರಾಸುಗಳನ್ನು ರೈತರು ಬೆಂಕಿಯಲ್ಲಿ ಕಿಚ್ಚು ಹಾಯಿಸಿದರು. ಪಟ್ಟಣದ ಪ್ರಮುಖ ಬಡಾವಣೆಗಳು ಸೇರಿದಂತೆ ಎಲ್ಲೆಡೆ ಯುವಕರು ಸಂಭ್ರಮಿಸಿದರು.

ಪಟ್ಟಣದ ಪೇಟೆ ಒಕ್ಕಲಗೇರಿ ಟೋಲ್ ಗೇಟ್, ಕನಕಪುರ ರಸ್ತೆ, ಸುಲ್ತಾನ್ ರಸ್ತೆ, ಕೊಳ್ಳೇಗಾಲ ರಸ್ತೆ, ಮೈಸೂರು ರಸ್ತೆ ಸೇರಿದಂತೆ ವಿವಿಧೆಡೆ ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮಗಳ ಪ್ರಮುಖ ರಸ್ತೆಗಳಲ್ಲಿ ರೈತರು ತಮ್ಮ ರಾಸುಗಳನ್ನು ಕಿಚ್ಚು ಹಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.