ADVERTISEMENT

ಯಂತ್ರದಿಂದ ಭತ್ತ ನಾಟಿ; ಮಹಿಳೆಯರಿಗೂ ಸಾಧ್ಯ: ಮಂಡ್ಯ CEO ನಂದಿನಿ ಪ್ರಾತ್ಯಕ್ಷಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಸೆಪ್ಟೆಂಬರ್ 2025, 8:02 IST
Last Updated 13 ಸೆಪ್ಟೆಂಬರ್ 2025, 8:02 IST
<div class="paragraphs"><p>ಯಾಂತ್ರೀಕೃತ ವಿಧಾನದಲ್ಲಿ ಭತ್ತದ ನಾಟಿ ಮಾಡುತ್ತಿರುವ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್.</p></div>

ಯಾಂತ್ರೀಕೃತ ವಿಧಾನದಲ್ಲಿ ಭತ್ತದ ನಾಟಿ ಮಾಡುತ್ತಿರುವ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್.

   

ಮಂಡ್ಯ: ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರೂ ಮಾಡಲು ಸಾಧ್ಯ ಎಂದು ಸಂದೇಶ ಸಾರುವ ನಿಟ್ಟಿನಲ್ಲಿ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸ್ವತಃ ಭತ್ತ ನಾಟಿ ಮಾಡಿದರು.

ಬುಧವಾರ ಜಿಲ್ಲಾ ಪಂಚಾಯತ್, ಮಂಡ್ಯ ಮತ್ತು ಕೃಷಿ ಇಲಾಖೆ ಮಂಡ್ಯ ವತಿಯಿಂದ ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಏರ್ಪಡಿಸಲಾಗಿದ್ದ ಯಾಂತ್ರೀಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ ಅವರು, ಯಾಂತ್ರೀಕೃತ ವಿಧಾನದ ಮೂಲಕ ಮಹಿಳೆಯರೂ ಭತ್ತ ನಾಟಿ ಮಾಡಬಹುದು ಎಂಬ ವಿಶ್ವಾಸ ತುಂಬಲು ಸ್ವತಃ ನಾಟಿ ಪ್ರಕ್ರಿಯೆಯಲ್ಲಿ ತೊಡಗಿದರು.

ADVERTISEMENT

ಭತ್ತ ನಾಟಿಗೆ ಯಂತ್ರ ಬಳಸಲು ಮಹಿಳೆಯರಿಗೆ ಸಾಧ್ಯವಿಲ್ಲ, ಅವರಿಂದ ಯಂತ್ರವನ್ನು ನಿರ್ವಹಣೆ ಮಾಡಲು ಅಸಾಧ್ಯ ಎಂಬ ಕಲ್ಪನೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಮಹಿಳೆಯರು ಕೂಡ ಯಂತ್ರದ ಮೂಲಕ ಭತ್ತ ನಾಟಿ ಮಾಡಬಹುದು ಹಾಗೂ ಯಂತ್ರವನ್ನು ನಿರ್ವಹಣೆ ಮಾಡಬಹುದು ಎಂದು ತರಬೇತಿಗೆ ಬಂದಿದ್ದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಭತ್ತ ನಾಟಿಗೆ ಕೃಷಿ ಕೂಲಿಕಾರರು ಸರಿಯಾದ ಸಮಯದಲ್ಲಿ ದೊರೆಯುತ್ತಿಲ್ಲ, ಇದರಿಂದ ಸರಿಯಾದ ಸಮಯದಲ್ಲಿ ನಾಟಿ ಮಾಡಲು ಸಾಧ್ಯವಾಗದೇ ಇಳುವರಿ ಕಡಿಮೆಯಾಗುತ್ತಿದೆ. ಯಾಂತ್ರೀಕೃತ ವಿಧಾನದ ಭತ್ತ ನಾಟಿಯಿಂದ ಭತ್ತ ನಾಟಿಯ ವೆಚ್ಚ ತಗ್ಗಿಸಬಹುದಾಗಿದೆ ಹಾಗೂ ಕಡಿಮೆ ಸಮಯದಲ್ಲಿ ನಾಟಿ ಮಾಡಬಹುದಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.