ADVERTISEMENT

ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 3:36 IST
Last Updated 7 ಅಕ್ಟೋಬರ್ 2020, 3:36 IST
ಖಾಸಗೀಕರಣ ವಿರೋಧಿಸಿ ಸೆಸ್ಕ್ ನೌಕರರು ಪ್ರತಿಭಟನೆ ನಡೆಸಿದರು
ಖಾಸಗೀಕರಣ ವಿರೋಧಿಸಿ ಸೆಸ್ಕ್ ನೌಕರರು ಪ್ರತಿಭಟನೆ ನಡೆಸಿದರು   

ಭಾರತೀನಗರ: ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಸೆಸ್ಕ್ ನೌಕರರು ಪ್ರತಿಭಟನೆ ನಡೆಸಿದರು.

ಇಲ್ಲಿನ ಸೆಸ್ಕ್ ಕಚೇರಿ ಆವರಣದಲ್ಲಿ ಜಮಾಯಿಸಿದ ನೌಕರರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದರಿಂದ ಬಂಡವಾಳ ಶಾಹಿಗಳು ತಮಗಿಷ್ಟ ಬಂದಂತೆ ವಿದ್ಯುತ್ ದರ ನಿಗದಿ ಮಾಡಲಿದ್ದಾರೆ. ಇದರಿಂದ ರೈತರು ಸೇರಿದಂತೆ ಜನಸಾಮಾನ್ಯರ ಮೇಲೆ ಹೊರೆ ಬೀಳಲಿದೆ. ಅಲ್ಲದೆ, ಸಾಕಷ್ಟು ನೌಕರರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಖಾಸಗೀಕರಣ ಮಾಡುವುದನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಶಾಖಾಧಿಕಾರಿ ಶಿವಕುಮಾರ್ ಮಾತನಾಡಿ, ರಾಜ್ಯದಾದ್ಯಂತ ಸೆಸ್ಕ್– ಬೆಸ್ಕ್ ಸೇರಿದಂತೆ ವಿದ್ಯುತ್ ಇಲಾಖೆಗಳನ್ನು ಸರ್ಕಾರ ಖಾಸಗೀಕರಣ ಮಾಡಲು ಹೊರಟಿದೆ. ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಿಗುತ್ತಿರುವ ಉಚಿತ ವಿದ್ಯುತ್ ರದ್ದಾಗಲಿದೆ. ಬಡ ಜನರಿಗೆ ಸರ್ಕಾರ ನೀಡುತ್ತಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಉಚಿತ ವಿದ್ಯುತ್ ಸಂಪರ್ಕಗಳು ಕಡಿತವಾಗಲಿವೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಶಾಖಾಧಿಕಾರಿ ಪಿ.ನಂದಕುಮಾರ್, ಸಿ.ಆರ್. ಶಿವಕುಮಾರ್, ನೌಕರರ ಸಂಘ ಹಾಗೂ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಕೆ.ಎ. ಸುರೇಶ್, ಪುಟ್ಟಸ್ವಾಮಿ, ಅನಿಲ್ ಕುಮಾರ್, ತಿಮ್ಮೇಗೌಡ, ಕೆ.ಎಸ್.ಶಿವರಾಜ್, ನವೀನ್ ಕುಮಾರ್, ಆರ್.ಪ್ರಕಾಶ್, ಸುರೇಶ್ಬಾಬು, ನಾಗರತ್ನ, ಜ್ಯೋತಿ ಬಾಯಿ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.