ADVERTISEMENT

ಜನರಿಂದ ದೂರು ಬಾರದಂತೆ ನೋಡಿಕೊಳ್ಳಿ: ಚೇತನಾ ಯಾದವ್‌

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 3:05 IST
Last Updated 20 ಜುಲೈ 2025, 3:05 IST
ಶ್ರೀರಂಗಪಟ್ಟಣ ತಹಶೀಲ್ದಾರ್‌ ಆಗಿ ಚೇತನಾ ಯಾದವ್‌ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಜ್ಞಾನೇಶ್ ಮತ್ತು ಪದಾಧಿಕಾರಿಗಳು ಶನಿವಾರ ಅವರನ್ನು ಅಭಿನಂದಿಸಿದರು
ಶ್ರೀರಂಗಪಟ್ಟಣ ತಹಶೀಲ್ದಾರ್‌ ಆಗಿ ಚೇತನಾ ಯಾದವ್‌ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಜ್ಞಾನೇಶ್ ಮತ್ತು ಪದಾಧಿಕಾರಿಗಳು ಶನಿವಾರ ಅವರನ್ನು ಅಭಿನಂದಿಸಿದರು   

ಶ್ರೀರಂಗಪಟ್ಟಣ: ‘ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಸಾರ್ವಜನಿಕರಿಂದ ದೂರುಗಳ ಬಾರದಂತೆ ನೋಡಿಕೊಳ್ಳಬೇಕು’ ಎಂದು ನೂತನ ತಹಶೀಲ್ದಾರ್‌ ಚೇತನಾ ಯಾದವ್‌ ತಾಕೀತು ಮಾಡಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಕಂದಾಯ ಇಲಾಖೆ ನೌಕರರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ‘ಜನರಿಂದ ಬರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ವಿನಾಕಾರಣ ಅಲೆದಾಡಿಸಬಾರದು. ಸಾರ್ವಜನಿಕ ಸಮಸ್ಯೆಗಳನ್ನು ಆರಂಭದಲ್ಲೇ ಪರಿಹರಿಸಬೇಕು. ಸೂಕ್ಷ್ಮ ಪ್ರಕರಣಗಳಿದ್ದರೆ ತಕ್ಷಣ ನನ್ನ ಗಮನಕ್ಕೆ ತರಬೇಕು’ ಎಂದು ಹೇಳಿದರು.

‘ಕಂದಾಯ ಇಲಾಖೆ ಉಳಿದೆಲ್ಲ ಇಲಾಖೆಗಳಿಗೆ ಮಾತೃ ಸಂಸ್ಥೆಯಾಗಿದೆ. ತಾಲ್ಲೂಕು ಕಚೇರಿ, ನಾಡ ಕಚೇರಿ, ಕಂದಾಯ ನಿರೀಕ್ಷಕರ ಕಚೇರಿ ಮತ್ತು ಗ್ರಾಮಾಡಳಿತ ಅಧಿಕಾರಿಗಳ ಕಚೇರಿಗಳಿಗೆ ಹೆಚ್ಚು ಜನರು ಬರುವುದು ಸಹಜ. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇತರ ಇಲಾಖೆಗಳ ಜತೆ ಸಂವಹನ ಸಾಧಿಸಿ ಕೆಲಸ ಮಾಡಬೇಕು’ ಎಂದು ಅವರು ತಿಳಿಸಿದರು.

ADVERTISEMENT

ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಟಿ.ಪಿ. ರೇವಣ್ಣ, ಗ್ರಾಮ ಸಹಾಯಕರ ಸಂಘ, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.