ಮಂಡ್ಯ ಠಾಣೆಯ ಪ್ರಮುಖ ಅಗ್ನಿಶಾಮಕ ಪ್ರಭಾಕರ್ ಶೆಟ್ಟಿ ಅವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.
ಮಂಡ್ಯ: ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಮಂಡ್ಯ ಠಾಣೆಯ ಪ್ರಮುಖ ಅಗ್ನಿಶಾಮಕ ಪ್ರಭಾಕರ್ ಶೆಟ್ಟಿ ಮತ್ತು ಪಾಂಡವಪುರ ಠಾಣೆಯ ಪ್ರಮುಖ ಅಗ್ನಿಶಾಮಕ ಹರೀಶ್ ಎನ್.ಎಸ್. ಅವರಿಗೆ ಬೆಂಗಳೂರಿನ ಆರ್.ಎ. ಮುಂಡ್ಕೂರು ಅಗ್ನಿಶಾಮಕ ಅಕಾಡೆಮಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು 2024ನೇ ಸಾಲಿನ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಅವರ ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.
ಯಾವುದೇ ಅನಾಹುತಗಳು ಸಂಭವಿಸಿದಾಗ ಮೊದಲು ಮುನ್ನುಗ್ಗಿ ಬಂದು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಅಗ್ನಿಶಾಮಕ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಅವರ ಕಾರ್ಯವೈಖರಿ ಮತ್ತು ದಕ್ಷತೆಯನ್ನು ಗುರುತಿಸಿ ಸರ್ಕಾರ ಚಿನ್ನದ ಪದಕವನ್ನು ನೀಡಿದೆ. ಈ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಇಬ್ಬರು ಚಿನ್ನದ ಪದಕ ವಿಜೇತರನ್ನು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು, ಅಧಿಕಾರಿ ವೃಂದ ಮತ್ತು ಸಹೋದ್ಯೋಗಿಗಳು, ಸಾರ್ವಜನಿಕರು ಅಭಿನಂದಿಸಿದ್ದಾರೆ.
ಪಾಂಡವಪುರ ಠಾಣೆಯ ಪ್ರಮುಖ ಅಗ್ನಿಶಾಮಕ ಹರೀಶ್ ಎನ್.ಎಸ್. ಅವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.