ADVERTISEMENT

ಎಲ್ಲ ಕ್ಷೇತ್ರದಲ್ಲಿ ಚುಂಚನಗಿರಿ ಮಠ ಛಾಪು ಮೂಡಿಸಿದೆ: ಸಚಿವ ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 12:59 IST
Last Updated 1 ಡಿಸೆಂಬರ್ 2023, 12:59 IST
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ 26ನೇ ರಾಜ್ಯ ಮಟ್ಟದ ಚುಂಚಾದ್ರಿ ಕ್ರೀಡೋತ್ಸವದಲ್ಲಿ ಕ್ರೀಡಾಪಟುಗಳ ಪಥಸಂಚಲನ ತಂಡದಿಂದ ಗಣ್ಯರು ಗೌರವ ಸ್ವೀಕರಿಸಿದರು
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ 26ನೇ ರಾಜ್ಯ ಮಟ್ಟದ ಚುಂಚಾದ್ರಿ ಕ್ರೀಡೋತ್ಸವದಲ್ಲಿ ಕ್ರೀಡಾಪಟುಗಳ ಪಥಸಂಚಲನ ತಂಡದಿಂದ ಗಣ್ಯರು ಗೌರವ ಸ್ವೀಕರಿಸಿದರು   

ನಾಗಮಂಗಲ: ‘ಆದಿಚುಂಚನಗಿರಿ ಮಠವು ಅಕ್ಷರ, ಆರೋಗ್ಯ, ಪರಿಸರ ಸೇರಿದಂತೆ ಕ್ರೀಡಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸುವ ಮೂಲಕ ನಾಡಿನಾದ್ಯಂತ ಛಾಪು ಮೂಡಿಸುವ ಕೆಲಸ ಮಾಡುತ್ತಿದೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

ತಾಲ್ಲೂಕಿನ ಆದಿಚುಂಚನಗಿರಿ ಮಠದ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ 26ನೇ ರಾಜ್ಯ ಮಟ್ಟದ ‘ಚುಂಚಾದ್ರಿ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಮಾತನಾಡಿದರು.

‘ರಾಜ್ಯದ ವಿವಿಧ ಭಾಗದಿಂದ ಕ್ರೀಡಾಪಟುಗಳನ್ನು ಆಹ್ವಾನಿಸಿ ಹಬ್ಬದ ರೀತಿಯಲ್ಲಿ ಕ್ರೀಡೋತ್ಸವ ಆಯೋಜಿಸಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುತ್ತಿದೆ. ಆ ನಿಟ್ಟಿನಲ್ಲಿ ಕ್ರೀಡಾಪಟುಗಳು ಸೋಲುಗಳಿಂದ ಕುಗ್ಗದೇ, ಗೆಲುವಿನಿಂದ ಹಿಗ್ಗದೇ ಸಮಾನಾಗಿ ಸ್ವೀಕಾರ ಮನೋಭಾವವನ್ನು ಬೆಳೆಸಿಕೊಳ್ಳಬೇಕು’ ಎಂದರು.

ADVERTISEMENT

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ಕ್ರೀಡಾಪಟುಗಳಿಗೆ ಶುಭಕೋರುವ ಜೊತೆಗೆ ಕ್ರೀಡಾಪಟುಗಳಿಗೆ ಆಶೀರ್ವಚನ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಕ್ರೀಡಾಪಟುಗಳು ತಮ್ಮ ಶಿಕ್ಷಣ ಸಂಸ್ಥೆಗಳ ತಂಡದಲ್ಲಿ ಪಥಸಂಚಲನದಲ್ಲಿ ಭಾಗವಹಿಸಿ ಗಣ್ಯರಿಗೆ ಗೌರವ ಸಲ್ಲಿಸಿದರು. ನಂತರ ಕ್ರೀಡಾಪಟುಗಳ ಕ್ರೀಡಾಜ್ಯೋತಿ ತಂದು ಸಚಿವ ಎನ್.ಚಲುವರಾಯಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ನೀಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಮೂರು ದಿನಗಳ ಕಾಲ ಜರುಗುವ ಕ್ರೀಡಾಕೂಟದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪಿ.ಯು ಕಾಲೇಜು ಹಂತದ ಮೂರು ವಿಭಾಗದಲ್ಲಿ ಆಯೋಜಿಸಿದ್ದು, 5074 ಕ್ರೀಡಾಪಟುಗಳು, 150 ತೀರ್ಪುಗಾರರು, 80 ಜನ ತಂಡದ ಮ್ಯಾನೇಜರ್ ಭಾಗವಹಿಸಿದ್ದಾರೆ.

ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಬೆಂಗಳೂರು ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ರಾಮನಗರ ಶಾಖಾ ಮಠದ ಅನ್ನದಾನಿನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭೂನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ, ಕುಣಿಗಲ್ ಶಾಸಕ ರಂಗನಾಥ, ಹಿರಿಯ ಮುಖಂಡ ಕೆ.ಟಿ.ಶ್ರೀಕಂಠೇಗೌಡ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು, ಚಿಕ್ಕಬಳ್ಳಾಪುರದ ಶಿವರಾಮರೆಡ್ಡಿ ಇದ್ದರು

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ 26ನೇ ರಾಜ್ಯ ಮಟ್ಟದ ಚುಂಚಾದ್ರಿ ಕ್ರೀಡೋತ್ಸವವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.