ಶ್ರೀರಂಗಪಟ್ಟಣ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಸೇವಾ ನೌಕರರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಪುರಸಭೆ ಕಚೇರಿ ಎದುರು ಬೆಳಿಗ್ಗೆಯಿಂದ ಸಂಜೆ ವರೆಗೂ ಪ್ರತಿಭಟನಾ ಧರಣಿ ನಡೆಯಿತು. ಪೌರಸೇವಾ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಸರ್ಕಾರಿ ನೌಕರರಿಗೆ ಇರುವಂತೆ ಕೆಜಿಐಡಿ ಸೌಲಭ್ಯವನ್ನು ಕಲ್ಪಿಸಬೇಕು. ಆರೋಗ್ಯ ಸಂಜೀವಿನ ಯೋಜನೆಯ ಸೌಲಭ್ಯವನ್ನೂ ನಮಗೆ ಕೊಡಬೇಕು ಎಂದು ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಆಗ್ರಹಿಸಿದರು.
ಪುರಸಭೆ ಅಧ್ಯಕ್ಷ ಎಂ.ಎಲ್. ದಿನೇಶ್ ಮಾತನಾಡಿ, ಪೌರಸೇವಾ ನೌಕರರನ್ನು ಅರೆ ಸರ್ಕಾರಿ ನೌಕರರು ಎಂಬಂತೆ ನೋಡಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರಷ್ಟೇ ಕೆಲಸ ಮಾಡುವ ಇವರ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪುರಸಭೆ ಸದಸ್ಯರಾದ ಜಿ.ಎಸ್. ಶಿವು. ಎಸ್. ಪ್ರಕಾಶ್, ಎಸ್.ಟಿ. ರಾಜು, ಎಂ. ಶ್ರೀನಿವಾಸ್, ಪೌರಸೇವಾ ನೌಕರರ ಸಂಘದ ಸಂಘದ ಉಪಾಧ್ಯಕ್ಷ ರಾಜೇಶ್, ಕಾರ್ಯದರ್ಶಿ ಲಿಂಗರಾಜು, ಖಜಾಂಚಿ ದಿಲೀಪ್, ಸದಸ್ಯರಾದ ಅನ್ಸರ್, ಸುಮನಾ, ರಶ್ಮಿ, ಲೀಲಾಂಬಿಕಾ, ಲಿಖಿತ್, ಶರತ್, ಸಹನಾ, ಶಶಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.