
ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಕೆ.ಎಂ. ಉದಯ್ ಉದ್ಘಾಟಿಸಿದರು.
ಮದ್ದೂರು: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಕ್ರಮವಹಿಸಲಾಗುವುದು ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.
ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಚ್.ಕೆ.ನಂದೀಶ್ ಗೌಡ ಅವರ ಸೇವಾ ಮನೋಭಾವದಿಂದ ಅತ್ಯಾಧುನಿಕ ಮತ್ತು ಹೈಟೆಕ್ ಮಾದರಿಯ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಸಾರ್ವಜನಿಕರ ಸೇವೆಗೆ ಕಲ್ಪಿಸಿರುವುದು ಉತ್ತಮ ಬೆಳವಣಿಗೆ ಎಂದರು.
ತಮ್ಮನ್ನು ಗ್ರಾ.ಪಂ. ಸದಸ್ಯರನ್ನಾಗಿ ಆಯ್ಕೆಗೊಳಿಸಿರುವ ಸ್ಥಳೀಯ ಗ್ರಾಮಸ್ಥರಿಗೆ ಕೈಲಾದ ಸೇವೆ ಮಾಡಬೇಕೆಂಬ ಉದ್ದೇಶದಿಂದ, ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜು ಅವರಿಂದ ₹5 ಲಕ್ಷ ಅನುದಾನ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್‌ನ ಆರ್ಥಿಕ ನೆರವು ಹಾಗೂ ಸ್ಥಳೀಯ ಗ್ರಾ.ಪಂ.ನ ಸಹಕಾರದಿಂದ ಶುದ್ಧ ಕುಡಿಯುವ ನೀರಿನ ಘಟಕವು ಸ್ಥಾಪಿಸಲಾಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ನಂದೀಶ್ ಗೌಡ ತಿಳಿಸಿದರು.
ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ಕಳೆದ ಹಲವು ವರ್ಷಗಳಿಂದಲೂ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡು ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಸಾಮಗ್ರಿ, ಮೊಟ್ಟೆ ವಿತರಣೆ ಮತ್ತು ವಾಹನ ಸೌಲಭ್ಯ ಕಲ್ಪಿಸಿ ಶಿಕ್ಷಣ ಕ್ಷೇತ್ರಕ್ಕೂ ತನ್ನದೇ ಆದ ಸೇವೆ ಸಲ್ಲಿಸುತ್ತಿದೆ ಎಂದರು.
ಗ್ರಾ.ಪಂ. ಮಾಜಿ ಅಧ್ಯಕ್ಷೆ ವೀಣಾ, ಮಾಜಿ ಸದಸ್ಯರಾದ ಕಮಲಾಕ್ಷಿ, ಜ್ಯೋತಿ, ಅಪ್ಪಾಜಿಗೌಡ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.