ADVERTISEMENT

ಮೇ 2ರಂದು ಅಲ್ಲಾಪಟ್ಟಣಕ್ಕೆ ಸಿಎಂ: ಶಾಸಕ, ಡಿಸಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 13:34 IST
Last Updated 23 ಏಪ್ರಿಲ್ 2025, 13:34 IST
ಶ್ರೀರಂಗಪಟ್ಟಣ ತಾಲ್ಲೂಕಿನ ಅಲ್ಲಾಪಟ್ಟಣ ಗ್ರಾಮದ ಅನ್ನದಾನೇಶ್ವರ ದೇವಾಲಯ ಲೋಕಾರ್ಪಣೆ ಕಾರ್ಯಕ್ಕೆ ಮೇ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್‌. ನಂದಿನಿ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಅಲ್ಲಾಪಟ್ಟಣ ಗ್ರಾಮದ ಅನ್ನದಾನೇಶ್ವರ ದೇವಾಲಯ ಲೋಕಾರ್ಪಣೆ ಕಾರ್ಯಕ್ಕೆ ಮೇ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್‌. ನಂದಿನಿ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು   

ಶ್ರೀರಂಗಪಟ್ಟಣ: ತಾಲ್ಲೂಕಿನ ಅಲ್ಲಾಪಟ್ಟಣ ಗ್ರಾಮದಲ್ಲಿರುವ ತಮ್ಮ ಮನೆ ದೇವರು ಅನ್ನದಾನೇಶ್ವರ ದೇವಾಲಯ ಲೋಕಾರ್ಪಣೆಗೆ ಮೇ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ ಬುಧವಾರ ಸಿದ್ದತೆ ಪರಿಶೀಲಿಸಿದರು.

ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ರಮೇಶ ಬಂಡಿಸಿದ್ದೇಗೌಡ ಮತ್ತು ಅಧಿಕಾರಿಗಳು ಮುಖ್ಯಮಂತ್ರಿ ಅವರ ಕುಟುಂಬ ಪೂಜೆ ನೆರವೇರಿಸಲು ಯಾವುದೇ ತೊಡಕಾಗದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಸಿಎಂ ಮತ್ತು ಸಚಿವರು ಬರುವ ಮಾರ್ಗದಲ್ಲಿ ಸ್ವಚ್ಛತೆ ಇರಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒಗೆ ತಿಳಿಸಿದರು. ವಾಹನಗಳ ನಿಲುಗಡೆಗೆ ಜಾಗ ಸಮತಟ್ಟು ಮಾಡುತ್ತಿದ್ದು, ಗಣ್ಯರು ಮತ್ತು ಅತಿ ಗಣ್ಯರ ವಾಹನಗಳಿಗೆ ಪ್ರತ್ಯೇಕ ಸ್ಥಳ ನಿಗದಿ ಮಾಡಬೇಕು ಎಂದು ಎಂಜಿನಿಯರ್‌ಗೆ ಹೇಳಿದರು.

ADVERTISEMENT

ಕಾರ್ಯಕ್ರಮಕ್ಕೆ ಸಹಸ್ರಾರು ಮಂದಿ ಬರಲಿದ್ದು ಪ್ರಸಾದ ವ್ಯವಸ್ಥೆ ಮಾಡಲಾಗುತ್ತದೆ. ಸರದಿಯಂತೆ ಪ್ರಸಾದ ವಿತರಣೆ ನಡೆಯಬೇಕು. ದೇವಾಲಯದ ಜೀರ್ಣೋದ್ಧಾರ ಕಾರ್ಯದ ಅಂತಿಮ ಕಾರ್ಯಗಳನ್ನು ಮೂರು ದಿನ ಮುಂಚಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್‌. ನಂದಿನಿ, ಹೆಚ್ಚುವರಿ ಎಸ್ಪಿ ತಿಮ್ಮಯ್ಯ, ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೇಣು, ಎಇಇ ಜಸ್ವಂತ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.