ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಆತ್ಮವಿಶ್ವಾಸ ಹೆಚ್ಚಳ: ಧರ್ಮೇಶ್

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 2:08 IST
Last Updated 8 ಆಗಸ್ಟ್ 2025, 2:08 IST
ಮದ್ದೂರಿನ ಎಚ್. ಕೆ. ವೀರಣ್ಣಗೌಡ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಸಂಘ ಉದ್ಘಾಟನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಎಇಟಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಧರ್ಮೇಶ್ ಉದ್ಘಾಟಿಸಿದರು 
ಮದ್ದೂರಿನ ಎಚ್. ಕೆ. ವೀರಣ್ಣಗೌಡ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಸಂಘ ಉದ್ಘಾಟನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಎಇಟಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಧರ್ಮೇಶ್ ಉದ್ಘಾಟಿಸಿದರು    

ಮದ್ದೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸವು ಹೆಚ್ಚಾಗುತ್ತದೆ. ಅಂತೆಯೇ ಶಿಕ್ಷಣವು ಮಕ್ಕಳಿಗೆ ಜ್ಞಾನ ನೀಡುತ್ತದೆ ಎಂದು ಎಇಟಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಧರ್ಮೇಶ್ ಹೇಳಿದರು.

ಪಟ್ಟಣದ ಎಚ್. ಕೆ.ವೀರಣ್ಣಗೌ ಡ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ, ಕನ್ನಡ ಸಂಘ ಉದ್ಘಾಟನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಮಕ್ಕಳು ಯಾವುದೇ ತಾರತಮ್ಯವಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಭವಿಷ್ಯದ ಜೀವನವನ್ನು ಯಶಸ್ಸುಗಳಿಸಿ ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಬೆಳೆಸಿಕೊಂಡಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರಿದಂತೆ. ಮಕ್ಕಳು ಸಕಾರಾತ್ಮಕ ಗುಣ ಬೆಳೆಸಿಕೊಳ್ಳಬೇಕು’ ಎಂದರು.

ADVERTISEMENT

ಎಂ. ಹೆಚ್ಚ್ .ಚನ್ನೇಗೌಡ ವಿದ್ಯಾನಿಲಯದ ಗೌರವಾಧ್ಯಕ್ಷ ಕೆ.ಟಿ. ಚಂದು ನೀಟ್ ಮತ್ತು ಸಿಇಟಿ ಸ್ಪರ್ಧಾ ಪರೀಕ್ಷೆಯ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಿ. ಪಿ.ಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಸುನೀಲ್ ಕುಮಾರ್, ಶಾಂತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶಿವಪ್ಪ ನೀಟ್ ಪರೀಕ್ಷೆಯ ಸಂಪನ್ಮೂಲ ವ್ಯಕ್ತಿಗಳಾದ ವಿಶ್ವನಾಥ್, ರವಿಕಿರಣ್, ಮಂಜುನಾಥ್, ಪ್ರಾಂಶುಪಾಲರಾದ ಯು. ಎಸ್. ಶಿವಕುಮಾರ್, ಜಿ.ಸುರೇಂದ್ರ, ಕಿರಣ್, ನಂದಿನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.