ADVERTISEMENT

ಡಿಜಿ, ಐಜಿ, ಮಾನವ ಹಕ್ಕು ಆಯೋಗಕ್ಕೆ ದೂರು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 4:06 IST
Last Updated 5 ಮಾರ್ಚ್ 2021, 4:06 IST

ಮಂಡ್ಯ: ‘ಮಾಜಿ ಸಚಿವ ರಮೇಶ ಜಾರಕಿಹೊಳಿ ಅಶ್ಲೀಲ ವಿಡಿಯೊ ಬಿಡು ಗಡೆ ಮಾಡಿದ ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು’ ಎಂದು ಭಾರತ ಸಂವಿಧಾನ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕ ಅಧ್ಯಕ್ಷ ಎಸ್.ಪೂರ್ಣಚಂದ್ರ ಒತ್ತಾಯಿಸಿದ್ದಾರೆ.

ಈ ಸಂಬಂಧ ಡಿಜಿ, ಐಜಿಪಿ ಹಾಗೂ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿರುವ ಅವರು, ‘ದಿನೇಶ್ ಕಲ್ಲಹಳ್ಳಿ ಅವರು ಅಶ್ಲೀಲ ವಿಡಿಯೊ ತೋರಿಸಿ ಹನಿ ಟ್ರ್ಯಾಪ್‌ನ ಶಂಕೆ ಮೂಡಿಸಿದ್ದಾರೆ. ರಾಜ್ಯದ ಪ್ರಮುಖ ರಾಜಕಾರಣಿಗಳು ಮತ್ತು ಅಧಿಕಾರಿಗಳ ಸಿ.ಡಿಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದು, ಅವರ ಹಿಂದೆ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸಚಿವರ ಸಿ.ಡಿ ಬಿಡುಗಡೆ ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದು, ತಕ್ಷಣವೇ ದೂರು ನೀಡಿರುವ ದಿನೇಶ್ ಕಲ್ಲಹಳ್ಳಿ ಅವರನ್ನು ಬಂಧಿಸಿ ಅವರ ಬಳಿ ಎಷ್ಟು ಸಿ.ಡಿಗಳು ಇವೆ, ಇದರ ಹಿಂದೆ ಇರುವ ಪ್ರಭಾವಿಗಳು ಯಾರು ಎಂಬುದನ್ನು ಪತ್ತೆ ಹಚ್ಚಬೇಕು’ ಎಂದು ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.