
ಮದ್ದೂರು: ಎಂಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಲವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಬಲ, ಹುಮ್ಮಸ್ಸು ತಂದಿದೆ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ರಾತ್ರಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರನ್ನು ಅಭಿನಂದಿಸಿ ಮಾತನಾಡಿದರು.
ತಾಲ್ಲೂಕಿನಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೋಗಿಗೌಡ, ಸಂದರ್ಶ ಹಾಗೂ ಚೆಲುವರಾಜು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸ ತಂದಿದ್ದು, ಮುಂಬರುವ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಲಿದೆ ಎಂದರು.
‘ಮದ್ದೂರು ತಾಲ್ಲೂಕಿನಿಂದ ನಿರ್ದೇಶಕರಾದವರಿಗೂ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ನಾಯಕರ ಬಳಿ ಒತ್ತಡ ಹೇರಲಾಗುವುದು’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪಕ್ಷದ ಕಾರ್ಯಕರ್ತರು, ಮುಖಂಡರು ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ದುಡಿಯುವುದರ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಮನ್‌ಮುಲ್ ಅಧ್ಯಕ್ಷ ಶಿವಪ್ಪ, ಮುಖಂಡರಾದ ಸಿ.ಟಿ. ಶಂಕರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚೆಲುವರಾಜು, ಐಶ್ವರ್ಯಾ ಸತೀಶ್, ಕದಲೂರು ರವಿ, ಅಪ್ಪಾಜಿ ಗೌಡ, ಮುತ್ತುರಾಜು, ಯತೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.