ADVERTISEMENT

50 ಸಾವಿರ ಜನರ ಸದಸ್ಯತ್ವದ ಗುರಿ: ಶಾಸಕ ರಮೇಶ ಬಂಡಿಸಿದ್ದೇಗೌಡ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 5:26 IST
Last Updated 25 ಅಕ್ಟೋಬರ್ 2025, 5:26 IST
ಶ್ರೀರಂಗಪಟ್ಟಣ ಟೌನ್‌ ವ್ಯಾಪ್ತಿಯ ಗಂಜಾಂನಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಸಂಬಂಧ ನಡೆದ ಸಭೆಯಲ್ಲಿ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಶಾಸಕ ರಮೇಶ ಬಂಡಿಸಿದ್ದೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಪ್ರಕಾಶ್, ಪುರಸಭೆ ಅಧ್ಯಕ್ಷ ಎಂ.ಎಲ್‌. ದಿನೇಶ್ ಪಾಲ್ಗೊಂಡಿದ್ದರು
ಶ್ರೀರಂಗಪಟ್ಟಣ ಟೌನ್‌ ವ್ಯಾಪ್ತಿಯ ಗಂಜಾಂನಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಸಂಬಂಧ ನಡೆದ ಸಭೆಯಲ್ಲಿ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಶಾಸಕ ರಮೇಶ ಬಂಡಿಸಿದ್ದೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಪ್ರಕಾಶ್, ಪುರಸಭೆ ಅಧ್ಯಕ್ಷ ಎಂ.ಎಲ್‌. ದಿನೇಶ್ ಪಾಲ್ಗೊಂಡಿದ್ದರು   

ಶ್ರೀರಂಗಪಟ್ಟಣ: ‘ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 50 ಸಾವಿರ ಜನರನ್ನು ಕಾಂಗ್ರೆಸ್‌ ಸದಸ್ಯರನ್ನಾಗಿ ಮಾಡುವ ಗುರಿ ಇದ್ದು, ಪಕ್ಷದ ಪದಾಧಿಕಾರಿಗಳು ಈ ದಿಸೆಯಲ್ಲಿ ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಪಟ್ಟಣ ಸಮೀಪದ ಗಂಜಾಂನಲ್ಲಿ ಗುರುವಾರ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ನಿಮಿತ್ತ ನಡೆದ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೆಪಿಸಿಸಿ ಸೂಚನೆಯಂತೆ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಲಾಗುತ್ತಿದೆ. ಕಾಂಗ್ರೆಸ್‌ನ ಎಲ್ಲ ಮುಂಚೂಣಿ ಘಟಕಗಳಿಗೆ ಜವಾಬ್ದಾರಿ ನೀಡಲಾಗಿದೆ. ಮಹಿಳಾ ಘಟಕ, ಕಾರ್ಮಿಕ ಘಟಕ, ಎಸ್‌ಸಿ/ಎಸ್‌ಟಿ ಘಟಕ, ಯುವ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸದಸ್ಯತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಇದೇ ವೇಳೆ ಗಂಜಾಂನ ಜೆಡಿಎಸ್‌ ಮುಖಂಡರಾದ ದೇವರಾಜು, ರಮೇಶ್, ನಾಗಣ್ಣ, ಮಂಜು, ನಾಗೇಂದ್ರು, ಸುರೇಶ್, ಮಂಜಪ್ಪ ಇತರರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಕಾಂಗ್ರೆಸ್‌ಗೆ ಸೇರಿದವರನ್ನು ಶಾಸಕ ರಮೇಶ ಬಂಡಿಸಿದ್ದೇಗೌಡ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

ಪುರಸಭೆ ಅಧ್ಯಕ್ಷ ಎಂ.ಎಲ್‌. ದಿನೇಶ್, ಮಾಜಿ ಅಧ್ಯಕ್ಷ ಎಲ್‌. ನಾಗರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಪ್ರಕಾಶ್, ಪಕ್ಷದ ಯುವ ಘಟಕದ ಅಧ್ಯಕ್ಷ ರಜನಿಕಾಂತ್, ಕೆಪಿಸಿಸಿ ಮಾಜಿ ಸದಸ್ಯ ಎನ್. ಗಂಗಾಧರ್‌, ಪುರಸಭೆ ಸದಸ್ಯ ದಯಾನಂದ್, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಟಿ. ಕೃಷ್ಣ, ಟಿಎಪಿಸಿಎಂಎಸ್‌ ನಿರ್ದೇಶಕ ಅರಕೆರೆ ಶಿವಯ್ಯ, ಮುಖಂಡರಾದ ಬಾಲು, ಪೂರ್ಣಚಂದ್ರ, ರವಿಚಂದ್ರ, ಮಹೇಶ್, ಸಯ್ಯದ್ ಕಾಬೂಲ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.