ADVERTISEMENT

ಸಂವಾದ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:37 IST
Last Updated 25 ಸೆಪ್ಟೆಂಬರ್ 2020, 2:37 IST

ಮಂಡ್ಯ: ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಜಿಲ್ಲಾ ಘಟಕ, ಅನನ್ಯ ಆರ್ಟ್ಸ್‌ ಸಂಸ್ಥೆ ವತಿಯಿಂದ ಸೆ. 26ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಅಚೀವರ್ಸ್‌ ಇಂಟರ್‌ ನ್ಯಾಷನಲ್‌ ಪಬ್ಲಿಕ್‌ ಶಾಲೆಯಲ್ಲಿ ‘ಭಾರತೀಯ ಶಿಕ್ಷಣ– ಅನುಷ್ಠಾನದಲ್ಲಿ ಮೋದಿ ಸರ್ಕಾರದ ಹೆಜ್ಜೆಗಳು ಹಾಗೂ ಸವಾಲುಗಳು’ ಸಂವಾದ ಕಾರ್ಯಕ್ರಮ ಹಾಗೂ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಾ.ಸುಧಾಕರ ಹೊಸಳ್ಳಿ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಹೆಚ್ಚುವರಿ ಆಯುಕ್ತ ಡಾ. ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ಜಿಲ್ಲಾ ಪ್ರಭಾರಿ ಎ.ಮಂಜು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಚಿಂತಕ ಡಾ.ಲಕ್ಷ್ಮೀಶ್‌ ವಿಷಯ ಮಂಡಿಸಲಿದ್ದಾರೆ. ಮೈಲಾಕ್‌ ಮಾಜಿ ಅಧ್ಯಕ್ಷ ಮೈ.ವಿ.ರವಿಶಂಕರ್‌ ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷೆ ಬಿ.ಎಸ್‌.ಅನುಪಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.