ಮಳವಳ್ಳಿ: ತಾಲ್ಲೂಕಿನ ತಳಗವಾದಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಹನುಮಂತು ಹಾಗೂ ಉಪಾಧ್ಯಕ್ಷರಾಗಿ ರಾಜು ಅವಿರೋಧವಾಗಿ ಆಯ್ಕೆಯಾದರು.
ಸಂಘದ ಸಭಾಂಗಣದಲ್ಲಿ ಭಾನುವಾರ ಚುನಾವಣೆ ನಡೆಯಿತು. ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಸಂತೋಷ್ ಕುಮಾರ್ ಘೋಷಿಸಿದರು.
ನೂತನ ಅಧ್ಯಕ್ಷ ಹನುಮಂತು ಮಾತನಾಡಿ, ಜೆಡಿಎಸ್ ಬೆಂಬಲಿತ ಎಲ್ಲ ನಿರ್ದೇಶಕರು ಹಾಗೂ ಪಕ್ಷದ ಮುಖಂಡರು ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಸಂಘವನ್ನು ಅಭಿವೃದ್ಧಿ ಪಡಿಸಿ ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರ ಪ್ರಗತಿಗೆ ಮುಂದಾಗುವುದಾಗಿ ತಿಳಿಸಿದರು.
ನಿರ್ದೇಶಕರಾದ ಟಿ.ಎಸ್.ಚಂದ್ರು, ಲಿಂಗಯ್ಯ, ಹನುಮಂತು, ಸುಕನ್ಯಾ, ಶ್ವೇತಾ, ಜಯಮ್ಮ, ಸುರೇಶ್, ಬಸವರಾಜು, ಕಾರ್ಯದರ್ಶಿ ನಿಂಗರಾಜು ಹಾಗೂ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.