ADVERTISEMENT

ಮಂಡ್ಯ: ಒಂದು ಸಾವು, 63 ಮಂದಿಗೆ ಸೋಂಕು

ಸಾವಿನ ಸಂಖ್ಯೆ 22ಕ್ಕೆ ಏರಿಕೆ, 1184 ಪ್ರಕರಣಗಳು ಸಕ್ರಿಯ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 16:08 IST
Last Updated 9 ಆಗಸ್ಟ್ 2020, 16:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗಮಂಗಲ ತಾಲ್ಲೂಕಿನ ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

1,13,380ನೇ ರೋಗಿ ಜುಲೈ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟ, ಜ್ವರದಿಂದ ಬಳಲುತ್ತಿದ್ದ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶನಿವಾರ ಮೃತಪಟ್ಟಿದ್ದಾರೆ. ಕೋವಿಡ್‌ ಕಾರ್ಯಸೂಚಿಯನ್ವಯ ಭಾನುವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

63 ಮಂದಿಗೆ ಕೋವಿಡ್‌: ಭಾನುವಾರ ಹೊಸದಾಗಿ 63 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,558ಕ್ಕೆ ಏರಿಕೆಯಾಗಿದೆ.

ADVERTISEMENT

ಮಂಡ್ಯ ತಾಲ್ಲೂಕಿನ 34 ಮಂದಿ, ನಾಗಮಂಗಲ 13, ಮಳವಳ್ಳಿ 9, ಮದ್ದೂರು 3, ಶ್ರೀರಂಗಪಟ್ಟಣ 3, ಪಾಂಡವಪುರದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್‌ನಿಂದ ಗುಣಮುಖರಾದ 34 ಮಂದಿಯನ್ನು ಭಾನುವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಪಾಂಡವಪುರ ತಾಲ್ಲೂಕಿನ 11, ನಾಗಮಂಗಲ 10, ಶ್ರೀರಂಗಪಟ್ಟಣ 6, ಮಂಡ್ಯ 5 ಮಂದಿ ಗುಣಮುಖರಾಗಿ ಮನೆಗೆ ತೆರಳಿದರು.

ಇಲ್ಲಿಯವರೆಗೆ ಜಿಲ್ಲೆಯಲ್ಲಿ 1351 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು 1184 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 2,558

ಸಕ್ರಿಯ ಪ್ರಕರಣ: 1,184

ಏರಿಕೆ: 63

ಗುಣಮುಖ: 1,351

ಏರಿಕೆ: 34

ಸಾವು: 22

ಏರಿಕೆ: 01

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.