ADVERTISEMENT

ಇಬ್ಬರ ಸಾವು: 66 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 14:50 IST
Last Updated 18 ಸೆಪ್ಟೆಂಬರ್ 2020, 14:50 IST

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. 66 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು ಒಟ್ಟು ರೋಗಿಗಳ ಸಂಖ್ಯೆ 8,904ಕ್ಕೆ ಹೆಚ್ಚಾಗಿದೆ.

ಮದ್ದೂರು ತಾಲ್ಲೂಕಿನ 67 ವರ್ಷದ ವ್ಯಕ್ತಿ, 80 ವರ್ಷ ವಯಸ್ಸಿನ ವೃದ್ಧ ಮೃತಪಟ್ಟಿದ್ದಾರೆ. ಇಬ್ಬರಿಗೂ ನ್ಯೂಮೊನಿಯಾ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿದ್ದವು. ಕೋವಿಡ್‌ ಕಾರ್ಯಸೂಚಿಯಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಶುಕ್ರವಾರ ಹೊಸದಾಗಿ ಮಂಡ್ಯ ತಾಲ್ಲೂಕಿನ 22 ಮಂದಿ, ಕೆ.ಆರ್‌.ಪೇಟೆ 15, ಪಾಂಡವಪುರ 9, ಶ್ರೀರಂಗಪಟ್ಟಣ, ನಾಗಮಂಗಲ ತಲಾ 8, ಮಳವಳ್ಳಿ ತಾಲ್ಲೂಕಿನ ನಾಲ್ವರಲ್ಲಿ ಕೋವಿಡ್‌ ಪತ್ತೆಯಾಗಿದೆ. ಕೋವಿಡ್‌ನಿಂದ ಗುಣಮುಖರಾದ 108 ಮಂದಿ ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಮಂಡ್ಯ ತಾಲ್ಲೂಕಿನ 75, ಶ್ರೀರಂಗಪಟ್ಟಣ 14, ನಾಗಮಂಗಲ 8, ಮದ್ದೂರು 6, ಪಾಂಡವಪುರ 2 ಮಂದಿಯನ್ನು ಮನೆಗೆ ಕಳುಹಿಸಲಾಯಿತು.

ADVERTISEMENT

ಒಟ್ಟು ರೋಗಿಗಳಲ್ಲಿ 6,919 ಮಂದಿ ಗುಣಮುಖರಾಗಿದ್ಧಾರೆ. 1,895 ಪ್ರಕರಣಗಳು ಸಕ್ರಿಯಾಗಿವೆ. ಇಲ್ಲಿಯವರೆಗೆ 1,06,604 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.