ADVERTISEMENT

ನೂರಕ್ಕೆ ನೂರರಷ್ಟು ಕೆಲಸ ಕಷ್ಟ: ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 3 ಮೇ 2021, 16:41 IST
Last Updated 3 ಮೇ 2021, 16:41 IST

ಮಂಡ್ಯ: ‘ಕೋವಿಡ್‌ ನಿರ್ವಹಣೆಯಲ್ಲಿ ನೂರಕ್ಕೆ ನೂರರಷ್ಟು ಸಮರ್ಪಕವಾಗಿ ಕೆಲಸ ಮಾಡುವುದು ಕಷ್ಟ. ಕೆಲವು ನ್ಯೂನತೆಗಳಿರುವುದು ನಿಜ, ಆದರೂ ಅವುಗಳನ್ನು ಮೀರಿ ಕೆಲಸ ಮಾಡುತ್ತಿದ್ದೇವೆ’ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್‌ ಸಾಂಕ್ರಾಮಿಕ ರೋಗವಾಗಿದ್ದು ಎಲ್ಲವನ್ನೂ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆಯೂ ಜನರ ಜೀವ ಉಳಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯಕ್ಕೆ ಅವಶ್ಯಕತೆಯುಳ್ಳ ಆಮ್ಲಜನಕ ಹಾಗೂ ಇತರ ವೈದ್ಯಕೀಯ ಸಹಾಯಕ್ಕಾಗಿ ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು.

‘ಗ್ರಾಮೀಣ ಭಾಗದಲ್ಲೂ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೂತ್‌ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಸಮಿತಿಯಲ್ಲಿ ಶಿಕ್ಷಣ, ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಯನ್ನು ಸೇರಿಸಿಕೊಂಡು ಸೋಂಕು ನಿಯಂತ್ರಣ ಮಾಡಲು ಸೂಚಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.