ADVERTISEMENT

ಕೋವಿಡ್‌: 360 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 15:00 IST
Last Updated 15 ಸೆಪ್ಟೆಂಬರ್ 2020, 15:00 IST

ಮಂಡ್ಯ: ಜಿಲ್ಲೆಯಲ್ಲಿ ಮಂಗಳವಾರ 199 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,568ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲ್ಲೂಕು 54, ಮದ್ದೂರು 23, ಮಳವಳ್ಳಿ 21, ಪಾಂಡವಪುರ 31, ಶ್ರೀರಂಗಪಟ್ಟಣ 14, ಕೆ.ಆರ್‌.ಪೇಟೆ 36, ನಾಗಮಂಗಲ 20 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮಂಗಳವಾರ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 360 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ಮಂಗಳವಾರ ಮಂಡ್ಯ ತಾಲ್ಲೂಕಿನ 247, ಮದ್ದೂರು 12, ಪಾಂಡವಪುರ 52, ಕೆ.ಆರ್‌.ಪೇಟೆ 28, ನಾಗಮಂಗಲ 21 ಸೇರಿದಂತೆ ಇಲ್ಲಿವರೆಗೆ 6,537 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು 1,943 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 431, ಖಾಸಗಿ ಆಸ್ಪತ್ರೆಯಲ್ಲಿ 108, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 459, ಹೋಮ್‌ ಐಸೋಲೇಷನ್‌ನಲ್ಲಿ 945 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.