ADVERTISEMENT

ಮಂಡ್ಯ: 102 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 15:01 IST
Last Updated 7 ಆಗಸ್ಟ್ 2020, 15:01 IST

ಮಂಡ್ಯ: ಹೊಸದಾಗಿ ಶುಕ್ರವಾರ 102 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,394ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲ್ಲೂಕಿನ 30 ಮಂದಿಯಲ್ಲಿ ಹೊಸದಾಗಿ ಕೋವಿಡ್‌ ಪತ್ತೆಯಾಗಿದ್ದು ಅವರಲ್ಲಿ 11 ಮಂದಿ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಮದ್ದೂರು ತಾಲ್ಲೂಕಿನ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಐವರಲ್ಲಿ ಜ್ವರ ಕಾಣಸಿಕೊಂಡಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ 16 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದ್ದು 6 ಮಂದಿಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿದೆ.

ಕೆ.ಆರ್‌.ಪೇಟೆ ತಾಲ್ಲೂಕಿನ 12 ಮಂದಿಯಲ್ಲಿ ರೋಗ ಪತ್ತೆಯಾಗಿದ್ದು ಮೂವರು ಜ್ವರದಿಂದ ಬಳಲುತ್ತಿದ್ದಾರೆ. ನಾಗಮಂಗಲದ 7 ಮಂದಿ, ಪಾಂಡವಪುರ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್‌ನಿಂದ ಗುಣಮುಖರಾದ 19 ಮಂದಿಯನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 8, ಕೆ.ಆರ್‌.ಪೇಟೆ 4, ಮದ್ದೂರು 3, ನಾಗಮಂಗಲ 2, ಶ್ರೀರಂಗಪಟ್ಟಣ, ಮಳವಳ್ಳಿ ತಾಲ್ಲೂಕಿನ ತಲಾ ಒಬ್ಬರು ಆಸ್ಪತ್ರೆಯಿಂದ ಮನೆಗೆ ತೆರಳಿದರು.

ADVERTISEMENT

ಇಲ್ಲಿಯವರೆಗೆ 1,265 ಮಂದಿ ಕೋವಿಡ್‌ ಮುಕ್ತರಾಗಿದ್ದಾರೆ. 1109 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 2,394

ಸಕ್ರಿಯ ಪ್ರಕರಣ: 1,109

ಏರಿಕೆ: 102

ಗುಣಮುಖ: 1,265

ಏರಿಕೆ: 20

ಸಾವು: 20

ಏರಿಕೆ: 00

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.