ಕೊಪ್ಪ (ಮಂಡ್ಯ ಜಿಲ್ಲೆ): ಸಮೀಪದ ಮೂಡಲದೊಡ್ಡಿ ಗ್ರಾಮದ ವೆಂಕಟೇಶ್ವರ ವಿದ್ಯಾನಿಕೇತನ ಶಾಲೆಯ ಎಲ್‌ಕೆಜಿ, ಯುಕೆಜಿ ಹಾಗೂ 1ರಿಂದ 5ನೇ ತರಗತಿ ವಿದ್ಯಾರ್ಥಿಗಳನ್ನು ಚಿಕ್ಕದೊಡ್ಡಿ ಗ್ರಾಮದ ಸಮುದಾಯ ಭವನದಲ್ಲಿ ಒಂದೇ ಕಡೆ ಕೂರಿಸಿ, ಅಂತರ ಕಾಯ್ದುಕೊಳ್ಳದೆ ಪಾಠ ಮಾಡಲಾಗುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ.
‘ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಪೋಷಕರಿಂದ ಬಲವಂತವಾಗಿ ಶುಲ್ಕ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ನೋಟಿಸ್ ಜಾರಿ: ‘ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದೇನೆ. ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಅವರಿಂದ ಮಾಹಿತಿ ಪಡೆದಿದ್ದೇನೆ. ಶಾಲೆಯ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡಿದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್. ರಘುನಂದನ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.