ADVERTISEMENT

ಕೋವಿಡ್‌ ರೋಗಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 6:10 IST
Last Updated 23 ಜುಲೈ 2020, 6:10 IST

ಮಂಡ್ಯ: ಕೋವಿಡ್‌–19 ನಿಂದ ಬಳಲುತ್ತಿದ್ದ 55 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಬುಧವಾರ ರಾತ್ರಿ ಕೋವಿಡ್‌ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಳವಳ್ಳಿ ತಾಲ್ಲೂಕು, ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಇದರಿಂದ ನೊಂದಿದ್ದ ಅವರು ಬುಧವಾರ ಮಧ್ಯರಾತ್ರಿ ಬಾತ್‌ರೂಂಗೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತರ ರೋಗಿಗಳು ಬಾತ್‌ರೂಂಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಕೋವಿಡ್ ಕಾರ್ಯಸೂಚಿ ಅನ್ವಯ ಗುರುವಾರ ಬೆಳಿಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.