ADVERTISEMENT

ಮೇಕೆದಾಟು ಯೋಜನೆ ದೇವೇಗೌಡರ ಕುಟುಂಬದಿಂದಲೇ ಆಗಬೇಕು: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 11:51 IST
Last Updated 4 ಜುಲೈ 2025, 11:51 IST
<div class="paragraphs"><p>ಕುಮಾರಸ್ವಾಮಿ</p></div>

ಕುಮಾರಸ್ವಾಮಿ

   

ಮಂಡ್ಯ: ಕಾಂಗ್ರೆಸ್‌ನವರು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ. ತಮಿಳುನಾಡಿನವರು ಕಾಂಗ್ರೆಸ್‌ನವರ ಪಾರ್ಟ್‌ನರ್‌ಗಳು. ಅವರ ಒಪ್ಪಿಗೆ ತಗೊಂಡು ಬನ್ನಿ. ಮೇಕೆದಾಟು ಮಾಡಿಸೋಣ. ಮೇಕದಾಟು ಯೋಜನೆ ದೇವೇಗೌಡರ ಕುಟುಂಬದಿಂದಲೇ ಆಗಬೇಕು. ಇವರ ಯಾರ ಕೈಯಲ್ಲೂ ಆಗಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. 

ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ 32ಕ್ಕೂ ಅಧಿಕ ಸಾವು ಆಗಿವೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿದೆ. ಪ್ರತಿ ತಾಲ್ಲೂಕಿನಲ್ಲೂ ಜೆಡಿಎಸ್‌ನಿಂದ ಹೃದಯ ತಪಾಸಣೆ ಮಾಡಲು ಚರ್ಚೆ ಮಾಡುತ್ತಿದ್ದೇವೆ. ಮಂಡ್ಯದ ಮಿಮ್ಸ್‌ ಆಸ್ಪತ್ರೆಯಲ್ಲಿ ಹೃದ್ರೋಗ ವಿಭಾಗ ತೆರೆಯಲು ರಾಜ್ಯ ಸರ್ಕಾರ ಕ್ರಮವಹಿಸಬೇಕು. ಸಚಿವರು ಇದಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು. 

ADVERTISEMENT

ನಿಖಿಲ್ ರಾಜ್ಯ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ನಿಖಿಲ್ ಓಡಾಡುತ್ತಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೂ ಇದಕ್ಕೂ ಸಂಬಂಧ ಇಲ್ಲ. ನಾವು (ಜೆಡಿಎಸ್‌) ರಾಜ್ಯದ 224 ಸ್ಥಾನಗಳಿಗೂ ಸ್ಪರ್ಧಿಸಲು ಸಾಧ್ಯವಿಲ್ಲ. ನಮಗೆ ಶಕ್ತಿ ಇರುವ ಕಡೆ ಸಂಘಟನೆ ಮಾಡುತ್ತಾ ಇದ್ದೇವೆ. ಚುನಾವಣೆ ಬಂದಾಗ ಕೇಂದ್ರ ನಾಯಕರ ಜೊತೆ ಕ್ಷೇತ್ರಗಳ ಬಗ್ಗೆ ಮಾತನಾಡುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.