ಪಾಂಡವಪುರ: ತಾಲ್ಲೂಕಿನ ಮಲ್ಲಿಗೆರೆ ಗ್ರಾಮದಲ್ಲಿ ₹2.11 ಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ‘ಬೂಕನಕೆರೆ–ಪಾಂಡವಪುರ ಮುಖ್ಯ ರಸ್ತೆಯಿಂದ ಡಿಂಕಾ–ಮಲ್ಲಿಗೆರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕಾವೇರಿ ನೀರಾವರಿ ನಿಗಮದ ಇಲಾಖೆ ಅನುದಾನದಡಿಯಲ್ಲಿ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೇಲುಕೋಟೆ ಕ್ಷೇತ್ರದಲ್ಲಿನ ಸಂಪರ್ಕ ರಸ್ತೆಗಳನ್ನು ಅಭಿವೃದ್ದಿಪಡಿಸಲಾ ಗುವುದು’ ಎಂದರು.
ಕಾವೇರಿ ನೀರಾವರಿ ನಿಗಮದ ಎಇಇ ಪಾರಕ್ ಅಹಮದ್, ಎಇ ಶಿವಕುಮಾರ್, ಆರ್.ಸಿ.ಕನ್ಸಲ್‌ಟೆಂಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಸಿ.ಚಂದ್ರು, ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜೇಗೌಡ, ಸದಸ್ಯೆ ರತಿ ಪಾಲಾಕ್ಷ, ಮುಖಂಡರಾದ ರಾಮಕೃಷ್ಣೇಗೌಡ, ಅಣ್ಣೇಗೌಡ, ರಾಜೇಶ್, ನಾಗೇಶ್, ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ದಯಾನಂದ್, ಕಾಂಗ್ರೆಸ್ ಮುಖಂಡರಾದ ಕೆ.ಕುಬೇರ, ಬಿ.ಜೆ.ಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.