ADVERTISEMENT

ಮಂಡ್ಯ: ಕೋವಿಡ್‌ ರೋಗಿಗಳ ಜಿಲ್ಲಾಧಿಕಾರಿ ಜೊತೆ ನೇರ ಸಂವಾದ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 15:59 IST
Last Updated 9 ಸೆಪ್ಟೆಂಬರ್ 2020, 15:59 IST
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಜೂಮ್‌ ಆ್ಯಪ್‌ ಮೂಲಕ ಕೋವಿಡ್‌ ರೋಗಿಗಳ ಜೊತೆ ನೇರ ಸಂವಾದ ನಡೆಸಿದರು
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಜೂಮ್‌ ಆ್ಯಪ್‌ ಮೂಲಕ ಕೋವಿಡ್‌ ರೋಗಿಗಳ ಜೊತೆ ನೇರ ಸಂವಾದ ನಡೆಸಿದರು   

ಮಂಡ್ಯ: ಜೂಮ್‌ ಆ್ಯಪ್‌ ಮೂಲಕ ವಿವಿಧ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿರುವ ರೋಗಿಗಳ ಜೊತೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಮಂಗಳವಾರ ನೇರವಾಗಿ ಸಂವಾದ ನಡೆಸಿದರು.

ಕೋವಿಡ್ ಆಸ್ಪತ್ರೆಗಳಲ್ಲಿ ನೀಡಿರುವ ಮೂಲ ಸೌಕರ್ಯಗಳು, ಊಟ, ಬಿಸಿ ನೀರಿನ ವ್ಯವಸ್ಥೆ, ಆಹಾರದ ಗುಣಮಟ್ಟದ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು. ರೋಗಿಗಳಿಗೆ ಯಾವುದೇ ಕೊರತೆಯಾಗದಂತೆ ಸೌಲಭ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಅಧಿಕಾರಿಗಳ ಸಭೆ ನಡೆಸಿ, ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಪರೀಕ್ಷೆಯನ್ನು ತ್ವರಿತವಾಗಿ ಮಾಡಬೇಕು. ಯಾವ ಹಂತದಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳ ವ್ಯವಸ್ಥೆಗಳ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ADVERTISEMENT

ನಗರ ಪ್ರದೇಶದಲ್ಲಿ ಮಾಸ್ಕ್‌ ಧರಿಸದ ಜನರಿಂದ ₹ 2,24,000, ಗ್ರಾಮಾಂತರ ಪ್ರದೇಶದಲ್ಲಿ ₹ 90 ಸಾವಿರ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.