ADVERTISEMENT

ಡಿ.ಸಿ.ಟಿ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:30 IST
Last Updated 16 ಏಪ್ರಿಲ್ 2025, 14:30 IST
ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಜನ್ಮದಿನದ ಅಂಗವಾಗಿ ಜೆಡಿಎಸ್ ಯುವ ಮುಖಂಡ ರಘುವೆಂಕಟೇಗೌಡ ಅವರ ನೇತೃತ್ವದಲ್ಲಿ ಹಣ್ಣು, ಹಂಪಲು ವಿತರಿಸಲಾಯಿತು
ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಜನ್ಮದಿನದ ಅಂಗವಾಗಿ ಜೆಡಿಎಸ್ ಯುವ ಮುಖಂಡ ರಘುವೆಂಕಟೇಗೌಡ ಅವರ ನೇತೃತ್ವದಲ್ಲಿ ಹಣ್ಣು, ಹಂಪಲು ವಿತರಿಸಲಾಯಿತು   

ಭಾರತೀನಗರ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಜನ್ಮದಿನದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.

ಜೆಡಿಎಸ್ ಯುವ ಮುಖಂಡ ರಘುವೆಂಕಟೇಗೌಡ ಮಾತನಾಡಿ, ‘ಡಿ.ಸಿ.ತಮ್ಮಣ್ಣ ಅವರು ತಮ್ಮ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಮದ್ದೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆ. ನಾಲ್ಕು ಭಾರಿ ಶಾಸಕರಾಗಿ ಆಯ್ಕೆಗೊಂಡು ರಾಜ್ಯದಲ್ಲಿಯೇ ಅತೀ ಹೆಚ್ಚು ಅಭಿವೃದ್ಧಿ ಮಾಡಿದ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು’ ಎಂದು ಹೇಳಿದರು.

ಆಡಳಿತ ವೈದ್ಯಾಧಿಕಾರಿ ಡಾ.ಅರ್ಜುನ್, ಗ್ರಾಮ ಪಂಚಾಯಿತಿ ಸದಸ್ಯ ಕಾರ್ಕಹಳ್ಳಿ ಮಹೇಶ್, ಕರಡಕೆರೆ ಯೋಗೇಶ್, ಕೆ.ಎಂ.ದೊಡ್ಡಿ ಬೋರೇಗೌಡ, ಅಣ್ಣೂರು ಸಂತೋಷ್, ಬೋರೇಗೌಡ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.