ಮಳವಳ್ಳಿ: ಒಕ್ಕಲಿಗ, ಕುರುಬ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಬಡವರು ಮತ್ತು ದುರ್ಬಲರ ಅಭಿವೃದ್ಧಿಗಾಗಿ, ಆಯಾ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.
‘ರಾಜ್ಯ ಸರ್ಕಾರ, ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಸ್ಥಾಪಿಸುತ್ತಿರುವುದು ಸ್ವಾಗತಾರ್ಹ. ಈ ಸಮುದಾಯದಲ್ಲೂ ಕಡುಬಡವರು ಇದ್ದಾರೆ. ಅವರ ಶ್ರೇಯೋಭಿವೃದ್ಧಿಗಾಗಿ ಇಂತಹ ಅಭಿವೃದ್ಧಿ ನಿಗಮ ಅವಶ್ಯಕ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.