ADVERTISEMENT

ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಮೇ 2025, 4:09 IST
Last Updated 28 ಮೇ 2025, 4:09 IST
ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕಾರ್ಯಕರ್ತರು ಮತ್ತು ನಗರಸಭೆ ಪೌರ ಸೇವಾ ನೌಕರರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು
ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕಾರ್ಯಕರ್ತರು ಮತ್ತು ನಗರಸಭೆ ಪೌರ ಸೇವಾ ನೌಕರರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು   

ಮಂಡ್ಯ: ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕಾರ್ಯಕರ್ತರು ಮತ್ತು ನಗರಸಭೆ ಪೌರ ಸೇವಾ ನೌಕರರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರಸಭೆ ಎದುರು ಜಮಾವಣೆಗೊಂಡು ಕಾರ್ಯಕರ್ತರು ಹಾಗೂ ಕಚೇರಿ ಬಾಗಿಲಿಗೆ ಬೀಗ ಜಡಿದ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿ ಘೋಷಣೆ ಕೂಗಿದರು. ಸಂಜೆವರೆಗೂ ಯಾವುದೇ ನಗರಸಭೆ ಕೆಲಸ ಕಾರ್ಯಗಳನ್ನು ಮಾಡಲಿಲ್ಲ. ಸಾರ್ವಜನಿಕರು ಬಂದು ಬಾಗಿಲು ಹಾಕಿರುವುದನ್ನು ನೋಡಿ ವಾಪಸ್‌ ಹೋಗುತ್ತಿದ್ದರು.

ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪೌರ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.

ವಾಹನ ಚಾಲಕರು, ನೀರು ಪೂರೈಕೆ ನೌಕರರು ನೇರ ಪಾವತಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ನೌಕರರಿಗೆ ಎಸ್ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು. ಸರ್ಕಾರವು ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ನಿರಂತರ ಧರಣಿ ಮಾಡುವ ಮೂಲಕ ಕಚೇರಿಗಾಗಲೀ ಅಥವಾ ಸ್ವಚ್ಛತೆಗಾಗಲಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಹೊರ ಗುತ್ತಿಗೆ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ.ನಾಗಣ್ಣ, ಪೌರ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜು, ಅರ್ಚನಾ, ಪೌರ ನೌಕರರಾದ ಗಿರೀಶ್ ಎಲೆಚಾಕನಹಳ್ಳಿ, ದಿನೇಶ್, ಮುಖಂಡರಾದ ಮುತ್ತಾಲಯ್ಯ, ಮಹದೇವು, ನಾಗೇಶ್, ರಾಜೇಗೌಡ, ಹೊನ್ನಯ್ಯ, ಬೊಮ್ಮಯ್ಯ, ಅಮ್ಮಯ್ಯಮ್ಮ, ಮಹದೇವು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.