ADVERTISEMENT

ನಾಲೆಗಳಿಗೆ ನೀರು ಹರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 5:10 IST
Last Updated 4 ಜುಲೈ 2025, 5:10 IST
ಬಿ.ಟಿ.ಮಂಜುನಾಥ್
ಬಿ.ಟಿ.ಮಂಜುನಾಥ್   

ಪಾಂಡವಪುರ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರೂ ಜಿಲ್ಲಾಡಳಿತ ನೀರು ಹರಿಸಲು ಮುಂದಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ಬಿ.ಟಿ.ಮಂಜುನಾಥ್ ಆರೋಪಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಆರ್‌ಎಸ್ ಅಣೆಕಟ್ಟೆಗೆ ಬಾಗೀನ ಅರ್ಪಿಸುವ ವೇಳೆ ನಾಲೆಗಳಿಗೆ ನೀರು ಹರಿಸುವಂತೆ ಸೂಚನೆ ನೀಡಿದ್ದರು. ಆದರೆ ಅಧಿಕಾರಿಗಳ ವಿಳಂಬ ಧೋರಣೆಯಿಂದಾಗಿ, ರೈತರು ಕಷ್ಟಪಟ್ಟು ಬೆಳೆದಿರುವ ಕಬ್ಬು ಬೆಳೆ ಒಣಗಿ ಹೋಗುತ್ತಿದೆ. ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದರು.
ಕಬ್ಬು ಒಣಗಿದರೆ ಇಳುವರಿ ಕಡಿಮೆಯಾಗಿ ನಷ್ಟ ಉಂಟಾದರೆ ಅದಕ್ಕೆ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳೇ ಹೊಣೆ. ಹಾಗಾಗಿ ಜಿಲ್ಲಾಡಳಿತ ಕೂಡಲೇ ನಾಲೆಗೆ ನೀರು ಹರಿಸುವ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT