
ಮಳವಳ್ಳಿ: ಶಿಕ್ಷಣ ಹಾಗೂ ಆರೋಗ್ಯ ಸುಧಾರಣೆ ಕಂಡರೆ ದೇಶದ ಅಭಿವೃದ್ಧಿ ಹೊಂದುವುದರಲ್ಲಿ ಸಂಶಯವಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಹೇಳಿದರು.
ಪಟ್ಟಣದ ಭಗವಾನ್ ಬುದ್ದ ಕಾಲೇಜು ವತಿಯಿಂದ ಶನಿವಾರ ನಡೆದ ಸಂವಿಧಾನ ದಿನಾಚರಣೆ ಹಾಗೂ ನೂತನ ಭಗವಾನ್ ಬುದ್ಧ ಕಾನೂನು ಕಾಲೇಜು ಉದ್ಘಾಟಿಸಿ ಅವರು ಮಾತನಾಡಿದರು.
‘ಸ್ವೇಚ್ಛಾಚಾರ ಸ್ವಾತಂತ್ರ್ಯ ಆಗಬಾರದು. ಪೂರ್ವಿಕರು ಕಂಡ ಸ್ವಾತಂತ್ರ್ಯವನ್ನು ಸಹಕಾರ ಗೊಳಿಸಿಕೊಳ್ಳಬೇಕಾದರೇ ನಮ್ಮನ್ನಾಳುವ ನಾಯಕರು ಕಲ್ಯಾಣ ರಾಜ್ಯವನ್ನಾಗಿ ಮಾಡಲು ಶ್ರಮಿಸಬೇಕಿದೆ. ಇತ್ತಿಚಿನ ದಿನಗಳಲ್ಲಿ ರಾಜಕಾರಣಿಗಳು ಯಾವುದೇ ಸಂದರ್ಭ ಬಂದರೂ ಅಧಿಕಾರ ಇರಬೇಕೆಂದು ಅಂದುಕೊಳ್ಳುತ್ತಾರೆ. ಇದು ಸರಿಯಾದ ನಿರ್ಧಾರವಲ್ಲ. ಪ್ರತಿಯೊಬ್ಬ ಪ್ರಜೆ ಗೌರವಯುತವಾಗಿ ಸಮಾಜದಲ್ಲಿ ನಿಂತುಕೊಳ್ಳಬೇಕು ಎನ್ನುವ ಕನಸನ್ನು ನನಸು ಮಾಡಲು ಜನಪ್ರತಿನಿಧಿಗಳು ಸೇವೆ ಸಲ್ಲಿಸಬೇಕು’ ಎಂದರು.
ಭಗವಾನ್ ಬುದ್ಧ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಯಮದೂರು ಸಿದ್ದರಾಜು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ್ಯಾಯಾಧೀಶ ಎಂ.ಆನಂದ್, ಹಿರಿಯ ಪತ್ರಕರ್ತ ಕೌಡ್ಲೆ ಚನ್ನಪ್ಪ, ಪರಿವರ್ತನಾ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪುಟ್ಟೇಗೌಡ, ಭಗವಾನ್ ಬುದ್ಧ ಕಾನೂನು ಕಾಲೇಜು ಪ್ರಾಂಶುಪಾಲೆ ಶೀಲಾ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಚೇತನ್‌ಕುಮಾರ್ ಇದ್ದರು.
‘ಕೆಲವರು ತಮಗೆ ಸಿಕ್ಕಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುವುದರ ಮೂಲಕ ತಮ್ಮ ಜವಾಬ್ದಾರಿಯನ್ನೇ ಮರೆಯುತ್ತಿದ್ದಾರೆ. ವಕೀಲರು ನೊಂದ ಜನರಿಗೆ ಸ್ಪಂದಿಸಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಚ್.ಪಿ.ಸಂದೇಶ್ ಹೈಕೋರ್ಟ್ ನ್ಯಾಯಮೂರ್ತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.