ಮಂಡ್ಯ: ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿರುವ ಮಾಜಿ ಪೊಲೀಸ್ ಅಧಿಕಾರಿ ಗಿರೀಶ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಮಾನವ ಹಕ್ಕು ಆಯೋಗಕ್ಕೆ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಅವರು ಆನ್‌ಲೈನ್‌ನಲ್ಲಿ ಗುರುವಾರ ದೂರು ಸಲ್ಲಿಸಿದ್ದಾರೆ.
ಧರ್ಮಸ್ಥಳ ವಿಷಯವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ತಮ್ಮ ಪಕ್ಕದಲ್ಲಿ ನಿಂತಿದ್ದ ಮದನ ಬುಗಡಿ ಎಂಬ ವ್ಯಕ್ತಿಯನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಮಟ್ಟಣ್ಣನವರ್ ಪರಿಚಯಿಸಿದ್ದಾರೆ. ಆದರೆ, ಆ ವ್ಯಕ್ತಿ ಹುಬ್ಬಳ್ಳಿಯಲ್ಲಿ ಕುಖ್ಯಾತ ರೌಡಿಶೀಟರ್, ಜೊತೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾನೆ ಎಂಬುದನ್ನು ದೂರಿನಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.