ADVERTISEMENT

‘1 ಲಕ್ಷ ಆರೋಗ್ಯ ಕಾರ್ಡ್‌ ವಿತರಣೆ’

ಸಿಂಧಘಟ್ಟದಲ್ಲಿ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 3:22 IST
Last Updated 13 ಮಾರ್ಚ್ 2022, 3:22 IST
ಕೆ.ಆರ್‌.ಪೇಟೆ ತಾಲ್ಲೂಕಿನ ಸಿಂಧಘಟ್ಟ ಗ್ರಾಮದಲ್ಲಿ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು. ದಿವ್ಯಾಪ್ರಭು, ಎಂ.ವಿ.ರೂಪಾ, ಶಿವಾನಂದಮೂರ್ತಿ, ಎಸ್.ಅಶ್ವತಿ, ಚಂದ್ರಶೇಖರ್ ಇದ್ದರು
ಕೆ.ಆರ್‌.ಪೇಟೆ ತಾಲ್ಲೂಕಿನ ಸಿಂಧಘಟ್ಟ ಗ್ರಾಮದಲ್ಲಿ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು. ದಿವ್ಯಾಪ್ರಭು, ಎಂ.ವಿ.ರೂಪಾ, ಶಿವಾನಂದಮೂರ್ತಿ, ಎಸ್.ಅಶ್ವತಿ, ಚಂದ್ರಶೇಖರ್ ಇದ್ದರು   

ಕೆ.ಆರ್‌.ಪೇಟೆ: ‘ಮಂಡ್ಯ ಜಿಲ್ಲೆಯಾದ್ಯಂತ ಅಧಿಕಾರಿಗಳು ತ್ವರಿತವಾಗಿ ಕಂದಾಯ ಇಲಾಖೆ ದಾಖಲೆಗಳನ್ನು ಮನೆಯ ಬಾಗಿಲಿಗೆ ತಲುಪಿಸಬೇಕು. ಈಗಾಗಲೇ 1 ಲಕ್ಷ ಆರೋಗ್ಯ ಕಾರ್ಡ್‌ಗಳನ್ನು ವಿವಿಧ ಹಳ್ಳಿಗಳ ಜನರಿಗೆ ವಿತರಣೆ ಮಾಡಲಾಗಿದೆ. ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಇನ್ನೂ ಹೆಚ್ಚಿನ ಜನರಿಗೆ ದಾಖಲಾತಿಗಳು ದೊರೆಯುವಂತಾಗಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಕೆ.ಆರ್. ಪೇಟೆ ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ನಡೆದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಾನು ಕೂಡ ರೈತರ ಕಷ್ಟವನ್ನು ಅರಿತಿದ್ದೇನೆ. ರೈತರ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಜನರ ಸೇವಕನಾಗಿ ತಾಲ್ಲೂಕನ್ನು ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತೇನೆ. ಮಾರ್ಚ್ 19ರಂದು ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಸರ್ಕಾರದಿಂದ 80 ಕಂಪನಿಗಳನ್ನು ಕರೆಸಿ ಸುಮಾರು 15 ಸಾವಿರ ಉದ್ಯೋಗವನ್ನು ಸ್ಥಳದಲ್ಲೇ ನೀಡುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಯುವಕರ ಕೈಗೆ ಕೆಲಸ ನೀಡಲಾಗುವುದು’ ಎಂದರು.

ADVERTISEMENT

‘‌ಸಂತೇಬಾಚಹಳ್ಳಿ, ಶೀಳನೆರೆ ಹೋಬಳಿಯ ಏತ ನೀರಾವರಿ ಯೋಜನೆ ಆರಂಭವಾಗಿದ್ದು, ಕೆರೆ ಕಟ್ಟೆ ತುಂಬಿಸುವ ಕೆಲಸ ನಡೆಯಲಿದೆ. ಕೃಷಿ ವಸ್ತು ಪ್ರದರ್ಶನ, ಪಿಂಚಣಿ ಅರ್ಜಿ ಸ್ವೀಕರಿಸುವ ಕೆಲಸ ಮಾಡಲಾಗುವುದು. ಆರ್.ಟಿ.ಸಿ ತಿದ್ದುಪಡಿ ಅರ್ಜಿ ಸ್ವೀಕಾರ ಕೇಂದ್ರ ತೆರೆಯಲಾಗುವುದು. ಹಳ್ಳಿಗಳಿಗೆ ಬೇಕಾದ ಕುಂದುಕೊರತೆಗಳಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರ ಮಾಡಲಾಗಿದೆ. ಕೃಷಿಗೆ ಸಂಬಂಧಿಸಿದಂತೆ ಯಂತ್ರಗಳು, ಪೈಪ್‌ಗಳನ್ನು ರೈತರಿಗೆ ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಾಪ್ರಭು, ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪಾ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ್, ಮುಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿ ಉಪಾಧ್ಯಕ್ಷರಾದ ಎಸ್.ಅಂಬರೀಶ್, ಕೆ.ಎಸ್. ಪ್ರಭಾಕರ್, ಮನ್ಮುಲ್ ನಿರ್ದೇಶಕ ತಮಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಕರ್ತೆನಹಳ್ಳಿ ಸುರೇಶ್, ಸಾರಂಗಿ ಮಂಜುನಾಥೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.