ಮಂಡ್ಯ: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಬಯಸುತ್ತೇನೆ. ಅದು ಭವಿಷ್ಯದಲ್ಲಿ ಈಡೇರಲಿದೆ’ ಎಂದು ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮದು ಹೈಕಮಾಂಡ್ ಪಕ್ಷ. ಏನೇ ತೀರ್ಮಾನವಿದ್ದರೂ ಕೈಗೊಳ್ಳುವುದು ಅದಕ್ಕೆ ಬಿಟ್ಟಿದ್ದು’ ಎಂದು ಹೇಳಿದರು.
‘ನವೆಂಬರ್‌ಗೆ ಯಾವ ರಾಜಕೀಯ ಕ್ರಾಂತಿಯೂ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುತ್ತಾರೆ. ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ. ಡಿಕೆಶಿಯವರೂ ಇಂಥಾದ್ದೇ ಮಾತನ್ನಾಡಿದ್ದಾರೆ. ಹೀಗಿರುವಾಗ ಗೊಂದಲ ಏಕೆ?’ ಎಂದೂ ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.