ADVERTISEMENT

ಕಣ್ಣುಮುಚ್ಚಿ ಕುಳಿತ ಆದಾಯ ತೆರಿಗೆ ಇಲಾಖೆ, ಇಡಿ: ಡಿ.ಕೆ.ಶಿ ಆರೋಪ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 10:31 IST
Last Updated 29 ನವೆಂಬರ್ 2019, 10:31 IST
ಸಂತೇಬಾಚಹಳ್ಳಿಯಲ್ಲಿ ಉಪಚುನಾವಣೆಯ ಸಂಬಂಧ ಕಾಂಗ್ರೇಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಪರವಾಗಿ ಮತಪ್ರಚಾರನಡೆಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ಸಂತೇಬಾಚಹಳ್ಳಿಯಲ್ಲಿ ಉಪಚುನಾವಣೆಯ ಸಂಬಂಧ ಕಾಂಗ್ರೇಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಪರವಾಗಿ ಮತಪ್ರಚಾರನಡೆಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು.   

ಸಂತೇಬಾಚಹಳ್ಳಿ: ಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮವನ್ನು ತಡೆಯಬೇಕು ಆದಾಯ ತೆರಿಗೆ ಇಲಾಖೆ, ಇಡಿ ಸಂಸ್ಥೆಗಳು ಕಣ್ಣು ಮುಚ್ಚಿ ಕುಳಿತಿರುವುದು ದುರದೃಷ್ಟಕರ ಸಂಗತಿ ಎಂದು ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಇಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಕ್ಷೇತ್ರದಲ್ಲೇ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಎರಡು ಬಾರಿ ಶಾಸಕರಾಗಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ದುಡಿದ ಚಂದ್ರಶೇಖರ್‌ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ಕೆ.ಬಿ.ಚಂದ್ರಶೇಖರ್, ಮಾಜಿ ಸಚಿವ ನರೇಂದ್ರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರಬಾಬು, ಮನ್‍ಮುಲ್ ನಿರ್ದೇಶಕ ಡಾಲು ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.