
ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಮಂಡ್ಯ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊಟೇಲ್ ವೊಂದರಲ್ಲಿ ಶುಕ್ರವಾರ ನಡೆದಿದೆ.
ಮೈಸೂರು ಜಿಲ್ಲೆ ಕೆ.ಆರ್.ನಗರ ಮೂಲದ ಸುಖದೇವ್ (53) ಆತ್ಮಹತ್ಯೆ ಮಾಡಿಕೊಂಡವರು.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಖದೇವ್ ಅವರು ಗುರುವಾರ ಮಂಡ್ಯ ನಗರದ ಹೊಟೇಲ್‌ನಲ್ಲಿ ಕೊಠಡಿ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು.
ಹೊಟೇಲ್‌ನ ರೂಂನಲ್ಲಿ ಸುಖದೇವ್ ಅವರು ಮದ್ಯ ಸೇವನೆ ಮಾಡಿದ್ದು, ಇದೇ ವೇಳೆ 30 ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಕೊಠಡಿಗೆ ತೆರಳಿದ್ದ ರೂಂ ಬಾಯ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮಿಮ್ಸ್ ಶವಾಗಾರಕ್ಕೆ ಸಾಗಿಸಿದರು.
ಕೌಟಂಬಿಕ ಕಲಹದಿಂದ ಸುಖದೇವ್ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಅವರಿಗೆ ಪತ್ನಿ ಗೀತಾ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.