ಶ್ರೀರಂಗಪಟ್ಟಣ: ತಾಲ್ಲೂಕಿನ ದೊಡ್ಡಪಾಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಎಸಿಎಸ್) ಆಡಳಿತ ಮಂಡಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಮೈತ್ರಿಕೂಟದ ಬೆಂಬಲಿತ 10 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಮಾಯಿಗೌಡ ಈ, ಚಂದ್ರು ಎಂ, ಧನಂಜಯ ಡಿ.ಇ, ಜಗದೀಶ್ ಎಂ, ಕೃಷ್ಣೇಗೌಡ ಡಿ.ಎಂ, ಮಹಿಳಾ ಮೀಸಲು ಕ್ಷೇತ್ರದಿಂದ ಲಕ್ಷ್ಮಮ್ಮ, ವೀಣಾ, ಬಿಸಿಎಂ–ಎ ಮೀಸಲು ಕ್ಷೇತ್ರದಿಂದ ಸ್ವಾಮಿ, ಬಿಸಿಎಂ–ಬಿ ಮೀಸಲು ಕ್ಷೇತ್ರದಿಂದ ಮಧು, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಶೇಖರ್, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ದೇವರಾಜ ನಾಯಕ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಶ್ರೀನಿವಾಸ್ ಕೆ.ಎನ್. ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಸೀಂ ಪಾಷ ತಿಳಿಸಿದ್ದಾರೆ.
ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ಬಿಜೆಪಿ– ಜೆಡಿಎಸ್ ಮೈತ್ರಿಕೂಟ ಬೆಂಬಲಿತರು ಜಯಗಳಿಸಿದ್ದಾರೆ ಎಂದು ಮುಖಂಡ ಮಹೇಶ್ ತಿಳಿಸಿದರು.
ನೂತನ ನಿರ್ದೇಶಕರನ್ನು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಸೋಮವಾರ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.