ADVERTISEMENT

ಮಂಡ್ಯ | ನಾಯಿ ಕಡಿತ ಪ್ರಕರಣ: ಮಕ್ಕಳ ಆಯೋಗದಿಂದ ಅಧಿಕಾರಿಗಳಿಗೆ ಸಮನ್ಸ್‌

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 2:42 IST
Last Updated 10 ಜುಲೈ 2025, 2:42 IST
<div class="paragraphs"><p> ನಾಯಿ</p></div>

ನಾಯಿ

   

(ಸಾಂದರ್ಭಿಕ ಚಿತ್ರ)

ಮಂಡ್ಯ: ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 6,900 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದು, ಇವರಲ್ಲಿ ಮಕ್ಕಳೇ ಅತಿ ಹೆಚ್ಚು ಬಾಧಿತರಾಗಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪಶುಸಂಗೋಪಾನ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ನಗರಸಭೆ ಪೌರಾಯುಕ್ತರು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅವರಿಗೆ ಸಮನ್ಸ್‌ ಜಾರಿ ಮಾಡಿದೆ.  

ADVERTISEMENT

ಪ್ರಜಾವಾಣಿಯಲ್ಲಿ ‘ನಾಯಿ ಕಡಿತ; ತತ್ತರಿಸಿದ ಮಕ್ಕಳು’ ಶೀರ್ಷಿಕೆಯ ವಿಶೇಷ ವರದಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳಿಂದ ನಲುಗುತ್ತಿರುವ ಮಕ್ಕಳ ಬಗ್ಗೆ ಸವಿಸ್ತಾರ ವರದಿ ಪ್ರಕಟಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಮಕ್ಕಳ ಆಯೋಗ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಿ, ಬೆಂಗಳೂರಿನಲ್ಲಿ ಒಂದು ಸುತ್ತಿನ ದೂರು ವಿಚಾರಣೆಯನ್ನು ನಡೆಸಿದೆ.  ‘ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡಬಹುದಾದ ಹೇಳಿಕೆಯನ್ನು ಲಿಖಿತವಾಗಿ ಹಾಗೂ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ವಿಚಾರಣಾ ಸಮಯದಲ್ಲಿ ಆಯೋಗಕ್ಕೆ ಸಲ್ಲಿಸಬೇಕು. ಎದುರುದಾರೆಲ್ಲರೂ ಖುದ್ದಾಗಿ ಮತ್ತು ಕಡ್ಡಾಯವಾಗಿ ಜುಲೈ 16ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ಆಯೋಗ ಸೂಚಿಸಿದೆ’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್‌ ತಿಳಿಸಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.