ಬೆಳಕವಾಡಿ: ಸಮೀಪದ ಮಲ್ಲಿಕ್ಯಾತನಹಳ್ಳಿ (ರೊಟ್ಟಿ ಕಟ್ಟೆ) ರಾಷ್ಟ್ರೀಯ ಹೆದ್ದಾರಿ 209ರ ಬಳಿ ವಿದ್ಯುತ್ ಸ್ಪರ್ಶಿಸಿ ಸೆಸ್ಕ್ ನೌಕರ ಹರ್ಷದ್ ಅಲಿ (30) ಶುಕ್ರವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಕವಾಡಿ ಸೆಸ್ಕ್ ಶಾಖೆಯಲ್ಲಿ ಲೈನ್‌ಮನ್ ಆಗಿದ್ದ ಹರ್ಷದ್ ಅಲಿ ಲೈನ್ ಕ್ಲಿಯರ್ ತೆಗೆದುಕೊಂಡು ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿದೆ.
ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.