ಹಲಗೂರು: ಸಮೀಪದ ಅಗಸನಪುರ ಹೊರವಲಯದಲ್ಲಿ ಮೇಯಲು ಹೋಗಿದ್ದಾಗ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ನಾಲ್ಕು ಕುರಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.
ಕೋಡಿಪುರ ಗ್ರಾಮದ ಬಸವೇಗೌಡ ಅವರ ಪುತ್ರ ಸಿದ್ದರಾಮು ಅವರು ಕುರಿ ಮೇಯಿಸಲು ಹೋದ ಸಂದರ್ಭ ದುರ್ಘಟನೆ ಸಂಭವಿಸಿದೆ.
ಹಾಡ್ಲಿ ವೃತ್ತದ ಚೆಸ್ಕಾಂ ಜೂನಿಯರ್ ಎಂಜಿನಿಯರ್ ಮಧುಸೂಧನ್ ಸ್ಥಳಕ್ಕೆ ಭೇಟಿ ನೀಡಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಪಶು ವೈದ್ಯಾಧಿಕಾರಿ ಡಾ.ಸಂದೇಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಎಎಸ್ಐ ರಮೇಶ್ ಮತ್ತು ಕಾನ್‌ಸ್ಟೆಬಲ್ ಗೋವರ್ಧನ್ ಸ್ಥಳ ಪರಿಶೀಲನೆ ನಡೆಸಿದರು.
‘₹1 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಸೆಸ್ಕ್ ಅಧಿಕಾರಿಗಳು ಶೀಘ್ರ ಸೂಕ್ತ ಪರಿಹಾರ ನೀಡಬೇಕು’ ಎಂದು ಸಿದ್ದರಾಮು ಮನವಿ ಮಾಡಿಕೊಂಡರು.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.