
ಪ್ರಜಾವಾಣಿ ವಾರ್ತೆ
ಮದ್ದೂರು: ತಾಲ್ಲೂಕಿನ ಕೆ. ಹೊನ್ನಲ ಗೆರೆಯ ಎಲೆದೊಡ್ಡಿ ಗ್ರಾಮದಲ್ಲಿ ರೈತ ಶೇಖರ್ ಅವರಿಗೆ ಸೇರಿದ ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಚಿರತೆ ಸೆರೆ ಹಿಡಿಯಲು ಬೋನ್ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಎಲೆದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಿದ್ದು, ಚಿರತೆಗಳ ಉಪಟಳ ತಡೆಯಲು ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಆತಂಕ ದೂರ ಮಾಡಬೇಕೆಂದು ಗ್ರಾ.ಪಂ. ಸದಸ್ಯರಾದ ಕೆ.ಎಸ್.ಬೀರೇಶ್, ಕೆ.ಸಿ.ರಾಘವೇಂದ್ರ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.