ಮಳವಳ್ಳಿ ಬಳಿ ವಿದ್ಯುತ್ ಸ್ಪರ್ಶದಿಂದ ಆನೆ ಸಾವು
ಬೆಳಕವಾಡಿ (ಮಂಡ್ಯ ಜಿಲ್ಲೆ): ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿಯ ಪಿ.ಜಿ.ಎಲ್ ರಸ್ತೆಯ ಬಳಿ ವನ್ಯಜೀವಿ ಅರಣ್ಯ ಪ್ರದೇಶದ ಉಳ್ಳಬಳ್ಳ ಹಳ್ಳದಲ್ಲಿ ವಿದ್ಯುತ್ ಸ್ಪರ್ಶದಿಂದ 15 ವರ್ಷದ ಹೆಣ್ಣಾನೆ ಮೃತಪಟ್ಟಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಗ್ರಾಮದ ಬಸಮ್ಮ ಮಹದೇವ್ ಅವರ ಜಮೀನಿನ ಮೇಲೆ ಹಾದು ಹೋಗಿದ್ದ ಕೆಪಿಟಿಸಿಎಲ್‌ನಿಂದ 66 ಕೆ.ವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆನೆ ಸಾವನ್ನಪ್ಪಿ 7 ದಿನಗಳಾಗಿವೆ ಎನ್ನಲಾಗಿದೆ.
‘ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ಮಾಡಿಸಿ, ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು’ ಎಂದು ಸಹಾಯಕ ವಲಯ ಅರಣ್ಯಾಧಿಕಾರಿ ಶಿವರಾಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.