ADVERTISEMENT

ನೇಣು ಹಾಕಿಕೊಂಡು ಎಂಜಿನಿಯರ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 4:06 IST
Last Updated 24 ಸೆಪ್ಟೆಂಬರ್ 2020, 4:06 IST

ನಾಗಮಂಗಲ: ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ತನ್ನ ಊರು ತಾಲ್ಲೂಕಿನ ಜೋಡಿನೇರಲೆಕೆರೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ದೇವೇಗೌಡರ ಮಗ ರವಿಚಂದ್ರ (27) ಆತ್ಮಹತ್ಯೆ ಮಾಡಿಕೊಂಡ ಯುವ ಎಂಜಿನಿಯರ್.

ಬೆಂಗಳೂರಿನಿಂದ ಗ್ರಾಮಕ್ಕೆ ಬಂದ ರವಿಚಂದ್ರ ತಮ್ಮ ಜಮೀನಿನಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದಾರೆ. ಪೋಷಕರು ಬೆಳಿಗ್ಗೆ ಜಮೀನಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ADVERTISEMENT

ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.