ADVERTISEMENT

ಮಂಡ್ಯ: ವಸತಿ ಶಾಲೆಗಳಲ್ಲಿ ಶುಚಿಯಾಗಿ ಅಡುಗೆ ಮಾಡಿಕೊಡಿ; ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 8 ಮೇ 2025, 11:35 IST
Last Updated 8 ಮೇ 2025, 11:35 IST
ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಅಡುಗೆಯವರ ಮತ್ತು ಅಡುಗೆ ಸಹಾಯಕರಿಗೆ ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಪುನಶ್ಚೇತನ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕುಮಾರ ಉದ್ಘಾಟಿಸಿದರು
ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಅಡುಗೆಯವರ ಮತ್ತು ಅಡುಗೆ ಸಹಾಯಕರಿಗೆ ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಪುನಶ್ಚೇತನ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕುಮಾರ ಉದ್ಘಾಟಿಸಿದರು   

ಮಂಡ್ಯ: ವಸತಿ ಶಾಲೆಗಳಲ್ಲಿ ಅಡುಗೆ ಮಾಡುವವರು ವಿದ್ಯಾರ್ಥಿಗಳಿಗೆ ಶುಚಿ ಹಾಗೂ ರುಚಿಯಾದ ಅಡುಗೆ ಮಾಡಿಕೊಟ್ಟರೆ ಅವರು ದೈಹಿಕ ಶಕ್ತಿಯುತರಾಗಿ ಓದಿನಲ್ಲಿ ತೊಡಗುತ್ತಾರೆ ಎಂದು ಜಿಲ್ಲಾಧಿಕಾರಿ ಕುಮಾರ ಸಲಹೆ ನೀಡಿದರು.

ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಅಡುಗೆಯವರ ಮತ್ತು ಅಡುಗೆ ಸಹಾಯಕರಿಗೆ ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆ ಕುರಿತು ನಡೆದ ವಿಶೇಷ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಹಸಿದವರಿಗೆ ಅನ್ನ ಹಾಕುವುದು ಮತ್ತು ಅಡುಗೆ ಮಾಡುವ ಕಾಯಕ ಶ್ರೇಷ್ಠವಾದದ್ದಾಗಿದೆ. ವಸತಿ ಶಾಲೆಗಳಲ್ಲಿ ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ವಿದ್ಯಾರ್ಥಿಗಳ ಆರೋಗ್ಯ ಅವರ ಕೈಯಲ್ಲಿರುತ್ತದೆ ಎಂಬುದನ್ನು ಮರೆಯಬಾರದು,  ಅಡುಗೆ ತಯಾರಕರು ಹಾಗೂ ಸಹಾಯಕರು ನಮ್ಮ ಇಲಾಖೆ ಹಾಗೂ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು’ ಎಂದು ತಿಳಿಸಿದರು.

ADVERTISEMENT

ಜಿ.ಪಂ. ಸಿಇಒ ಕೆ.ಆರ್.ನಂದಿನಿ ಮಾತನಾಡಿ, ‘ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಡುಗೆಯವರ ಕೊಡುಗೆ ಬಹು ಮುಖ್ಯವಾಗಿದೆ. ಎಲ್ಲಾ ಸಿಬ್ಬಂದಿಯು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಪಂಚಾಯಿತಿಯಿಂದ ಈಗಾಗಲೇ ಎಲ್ಲಾ ವಿದ್ಯಾರ್ಥಿ ನಿಲಯಗಳಿಲ್ಲಿ ಜಿಲ್ಲಾ ಮಟ್ಟದ ಸಹಾಯವಾಣಿಯನ್ನು ತೆರೆದಿದ್ದು, ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆ ಮನೆ, ಊಟದ ಮನೆ, ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿ ಅಳವಡಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕೆ.ಮಂಜುಳಾ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.