ADVERTISEMENT

ಮಂಡ್ಯ: ‘ಪರಿಸರ ಸ್ನೇಹಿ ವಸ್ತುಗಳ ಬಳಕೆ ಹೆಚ್ಚಲಿ’

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 6:32 IST
Last Updated 27 ಮಾರ್ಚ್ 2023, 6:32 IST
ಮಂಡ್ಯ ನಗರದಲ್ಲಿ ವಿಶ್ವಜಲ ದಿನದ ಅಂಗವಾಗಿ ಕಾವೇರಿ ಶಾಖಾ ನಾಲೆಯ 8ನೇ ವಿತರಣಾ ನಾಲೆಯ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು
ಮಂಡ್ಯ ನಗರದಲ್ಲಿ ವಿಶ್ವಜಲ ದಿನದ ಅಂಗವಾಗಿ ಕಾವೇರಿ ಶಾಖಾ ನಾಲೆಯ 8ನೇ ವಿತರಣಾ ನಾಲೆಯ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು   

ಮಂಡ್ಯ: ಪ್ಲಾಸ್ಟಿಕ್‌ ವಸ್ತುಗಳ ಬಳಕೆ ನಿಲ್ಲಿಸಬೇಕು. ಬಟ್ಟೆ ಬ್ಯಾಗ್‌ ಸೇರಿದಂತೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮನೋಭಾವ ಎಲ್ಲರಲ್ಲೂ ಹೆಚ್ಚಬೇಕು ಎಂದು ಕಾವೇರಿ ನೀರಾವರಿ ನಿಗಮ ವಿಸಿ ನಾಲಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಚ್.ಎಸ್.ನಾಗರಾಜು ಹೇಳಿದರು.

ನಗರದ ಕುವೆಂಪುನಗರ ಉದ್ಯಾನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಪರಿಸರ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿ, ಮಧುರ ಮಂಡ್ಯ ಲಯನ್ಸ್ ಸಂಸ್ಥೆ, ಎನ್ಎಸ್‌ಎಸ್ ಘಟಕ (ಸ್ನಾತಕೋತ್ತರ) ಮಹಿಳಾ ಸರ್ಕಾರಿ ಕಾಲೇಜಿನ ಸಹಯೋಗದಲ್ಲಿ ವಿಶ್ವ ಅರಣ್ಯ ದಿನ– ವಿಶ್ವ ಜಲ ದಿನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಪರಿಸರ ನಡಿಗೆ, ಕಾವೇರಿ ಶಾಖಾ ನಾಲೆಯ 8ನೇ ವಿತರಣಾ ನಾಲೆಯ ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ಹಾಗೂ ಜಲ ಜಾಗೃತಿ ಬಗ್ಗೆ ನಾಗರಿಕರಿಗೆ ಅರಿವು ಅಗತ್ಯವಾಗಿದೆ. ಪ್ರತಿಯೊಬ್ಬರೂ ಪ್ಲಾಸ್ಟಿಕ್ ತ್ಯಜಿಸಬೇಕು. ಬಟ್ಟೆ ಬ್ಯಾಗ್ ಬಳಸಬೇಕು. ಪರಿಸರದ ಅಸಮತೋಲನವು ವಿಶ್ವದ ಗಂಭೀರ ಸಮಸ್ಯೆಯಾಗಿದೆ. ಪರಿಸರ ಸಂರಕ್ಷಣೆ ಹಾಗೂ ನೀರು, ಅರಣ್ಯ ಸಂರಕ್ಷಣೆಗೆ ಹೆಚ್ಚುಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ADVERTISEMENT

ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್, ಮಧುರ ಮಂಡ್ಯ ಲಯನ್ಸ್ ಸಂಸ್ಥೆ ಅಧ್ಯಕ್ಷ ಸಿ.ತ್ಯಾಗರಾಜು ಮಾತನಾಡಿದರು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಕಾವೇರಿ ನೀರಾವರಿ ನಿಗಮ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೊಡ್ಡವೀರಯ್ಯ, ಎನ್.ಎಸ್.ಎಸ್. ಜಿಲ್ಲಾ ಸಂಯೋಜನಾಧಿಕಾರಿ ಪ್ರೊ.ವೈ.ಕೆ.ಭಾಗ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.